

ಕಾರವಾರ: ಕುಮಟಾ-ಹೊನ್ನಾವರ ಹೆದ್ದಾರಿಯಲ್ಲಿ ಹಂದಿಗೋಣ ಸಮೀಪ ಅಡುಗೆ ಅನಿಲ ತುಂಬಿದ ಟ್ಯಾಂಕರ್ ಪಲ್ಟಿಯಾಗಿದೆ. ಸಣ್ಣ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗುತ್ತಿದೆ ಎನ್ನಲಾಗಿದ್ದು. ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.
ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹುಬ್ಬಳ್ಳಿಗೆ ತೆರಳುತ್ತಿದ್ದಾಗ ಶನಿವಾರ ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಮದ್ಯದಲ್ಲೇ ಟ್ಯಾಂಕರ್ ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಟ್ಯಾಂಕರ್‌ನಿಂದ ಸಣ್ಣ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆ ಆಗುತ್ತಿದೆ ಎನ್ನಲಾಗಿದೆ. ಆದರೆ, ಅನಿಲ ಸೋರಿಕೆಯ ಕುರಿತು ಯಾವುದೇ ಖಚಿತ ಮಾಹಿತಿ ಇಲ್ಲ. ಸಣ್ಣ ಪ್ರಮಾಣದ ಲೀಕೇಜ್ ಇರಬಹುದು ಎಂದು ಆಸುಪಾಸಿನ ನಿವಾಸಿಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳ ಬದಲಿಸುವಂತೆ ಸೂಚನೆ ನೀಡಲಾಗುತ್ತಿದೆ. ಒಲೆ, ದೀಪ ಹಚ್ಚದಂತೆ ಸೂಚಿಸಲಾಗಿದೆ. ಸಂಜೆ 4 ಗಂಟೆಯವರೆಗೆ ಹೆದ್ದಾರಿ ಬಂದ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿರಿ ಲ್ಯಾಂಡಿಂಗ್ ವೇಳೆ ಸೇನಾ ವಿಮಾನ ಪತನ: 22 ವಿದ್ಯಾರ್ಥಿಗಳು ಸಜೀವ ದಹನ, ನಾಲ್ವರು ಕಣ್ಮರೆ
ಗ್ಯಾಸ್ ಟ್ಯಾಂಕರ್ ಬಿದ್ದ ಪರಿಣಾಮ ಕುಮಟಾ-ಹೊನ್ನಾವರ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಅನಿಲ ಸೋರಿಕೆ ನಿಯಂತ್ರಿ ಟ್ಯಾಂಕರ್ ಅನ್ನು ಮೇಲಕ್ಕೆತ್ತುವ ಕಾರ್ಯಾಚರಣೆ ನಡೆಸುತ್ತಿದ್ದರು. ವಾಹನಗಳಿಗೆ ಚಂದಾವರ ಮಾರ್ಗದಲ್ಲಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.