ವಿವೇಕಾನಂದ ಸಂಘದ ವತಿಯಿಂದ ಗೌರಿ ಗಣೇಶೋತ್ಸವ

Published on

ನಾಪೋಕ್ಲು: ಇಲ್ಲಿನ ಇಂದಿದಿರಾನಗರದ ವಿವೇಕಾನಂದ ಸಂಘದ ವತಿಯಿಂದ ಇಪ್ಪತ್ತನೇ ವರ್ಷದ ಗೌರಿ ಗಣೇಶೋತ್ಸವವನ್ನು ಆಗಸ್ಟ್ 27ರಿಂದ 31ರವರೆಗೆ ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತದೆ.

27 ರಂದು ಬುಧವಾರ ಬೆಳಗ್ಗೆ 9.30 ಗಂಟೆಗೆ ಶ್ರೀ ಮಹಾ ಗಣಪತಿ ಹೋಮ ಮತ್ತು ಶ್ರೀ ವಿನಾಯಕನ ಪ್ರತಿಷ್ಠಾಪನೆ ಹಾಗೂ ಪೂಜಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. 28ರಿಂದ 30 ರವರೆಗೆ ಪ್ರತಿದಿನ ಸಂಜೆ 7 ಗಂಟೆಯಿಂದ 10 ಗಂಟೆಯವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಆಗಸ್ಟ್ 31 ರಂದು ಭಾನುವಾರ ಮಧ್ಯಾಹ್ನ 12.30 ಗಂಟೆಗೆ ಮಹಾಪೂಜೆ, ಅನ್ನಸಂತರ್ಪಣೆಯ ಬಳಿಕ ವಿನಾಯಕ ಮೂರ್ತಿಯನ್ನು ಹೂವಿನ ಅಲಂಕೃತ ಮಂಟಪದಲ್ಲಿ ಅದ್ದೂರಿ ಮಂಟಪದಲ್ಲಿ ಪಟ್ಟಣದಲ್ಲಿ ಮೆರವಣಿಗೆ ಮಾಡಿ ಪವಿತ್ರ ಕಾವೇರಿ ನದಿಯಲ್ಲಿ ವಿಸರ್ಜಿಸಲಾಗುವುದು ಎಂದು ವಿವೇಕಾನಂದ ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net