

ಶನಿವಾರಸಂತೆ: ಸಮಿಪದ ಮುಳ್ಳೂರು-ಜಾಗೇನಹಳ್ಳಿ ಗ್ರಾಮಗಳ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರತಿಷ್ಠಾಪಿಸಿದ ಗೌರಿ-ಗಣೇಶ ಮೂರ್ತಿಯ ವಿಸರ್ಜನೋತ್ಸವ ಕಾಶರ್ಯಕ್ರಮ ಅದ್ದೂರಿಯಾಗಿ ನಡೆಯಿತು.
ವೇದಿಕೆಯಲ್ಲಿ ಪ್ರತಿಷ್ಠಾಪಿಸಿದ ಗೌರಿ-ಗಣೇಶ ಮೂರ್ತಿಗೆ ಅರ್ಚಕರು ಪೂಜೆ ಸಲ್ಲಿಸಿದರು. ನಂತರ ಅಲಂಕಾರಗೊಳಿಸಿದ ವಾಹನದಲ್ಲಿ ಗೌರಿ-ಗಣೇಶ ಮೂರ್ತಿಯನ್ನು ಕೂರಿಸಲಾಯಿತು. ಗ್ರಾಮದ ಬೀದಿಗಳಲ್ಲಿ ಮೆರವಣಿಗೆಯಲ್ಲಿ ತೆರಳಲಾಯಿತು. ಗ್ರಾಮಸ್ಥರು ಮೆರವಣಿಯನ್ನು ಬರ ಮಾಡಿಕೊಂಡು ಗೌರಿ-ಗಣೇಶ ಮೂರ್ತಿಗೆ ಪೂಜೆ ಸಲ್ಲಿಸಿದರು. ಸಂಜೆ ಗ್ರಾಮದ ಇಂಟಿನಾಯಕನ ಕೆರೆಯಲ್ಲಿ ಗೌರಿ-ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು. ಸೇವಾ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಸದಸ್ಯರು, ಗ್ರಾಮಸ್ಥರು ಇದ್ದರು.