ಶ್ರೀರಾಮುಲು ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ನೀಡಿದ್ದೇವೆ: ಡಿಕೆಶಿ ಲೇವಡಿ | Bihar Elections

Bbau (94)
Published on

ಬೆಂಗಳೂರು: ಬಿಹಾರ ಚುನಾವಣೆಗೆ(Bihar Elections) ಸಿಎಂ, ಡಿಸಿಎಂ 300 ಕೋಟಿ ರೂ. ಕಪ್ಪ ಕಾಣಿಕೆ ನೀಡಿದ್ದಾರೆ ಎಂಬ ಶ್ರೀರಾಮುಲು ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, "ಶ್ರೀರಾಮುಲು ಅವರು ಕಾಂಗ್ರೆಸ್ ಪಕ್ಷಕ್ಕೆ ಹಣ ನೀಡಿದ್ದು, ಅದನ್ನೇ ನಾವು ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ" ಎಂದು ಲೇವಡಿ ಮಾಡಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ, ದಲಿತ ಸಿಎಂ ವಿಚಾರವಾಗಿ ಸಚಿವರ ಚರ್ಚೆ ಬಗ್ಗೆ ಕೇಳಿದಾಗ, "ಅನಗತ್ಯ ಮಾತನಾಡಿ ದಣಿವಾಗುವುದು ಬೇಡ ಎಂದು ಮನವಿ ಮಾಡುತ್ತೇನೆ" ಎಂದು ತಿಳಿಸಿದರು.

ಸಚಿವರು, ಶಾಸಕರ ಅಭಿಪ್ರಾಯ ಪಡೆದು ಅಭ್ಯರ್ಥಿ ಅಂತಿಮ

ಕೆಪಿಸಿಸಿ ಕಚೇರಿಯಲ್ಲಿ ನಡೆದ ಮೇಲ್ಮನೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಸಭೆ ಬಗ್ಗೆ ಮಾತನಾಡಿ, "ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಪ್ರತಿ ಕ್ಷೇತ್ರದಲ್ಲಿ ಐದಾರು ಮಂದಿ ಟಿಕೆಟ್ ಆಕಾಂಕ್ಷಿಗಳು ಇದ್ದಾರೆ. 8-10 ದಿನಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ. ಮುಂದಿನ ಸಭೆಯಲ್ಲಿ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚೆ ಮಾಡಿ ಅಭಿಪ್ರಾಯ ಪಡೆಯುತ್ತೇವೆ" ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net