GBA ಮೊದಲ ಮೀಟಿಂಗ್​​; ಅಧಿಕಾರ ವಿಕೇಂದ್ರೀಕರಣ ವಿರೋಧಿಸುವರು ಸಭೆಯನ್ನು ವಿರೋಧಿಸುತ್ತಾರೆ: ಕುಟುಕಿದ CM

Untitled design - 2025-10-11T081151.469
Published on

GBA: ಚರ್ಚೆ-ಸಂವಾದದಿಂದ ಪ್ರಜಾಪ್ರಭುತ್ವ ಗಟ್ಟಿಯಾಗುತ್ತದೆ. ಏನೇ ವಿರೋಧಗಳಿದ್ದರೂ ಸಭೆಗೆ ಹಾಜರಾಗಿ ಚರ್ಚೆ ನಡೆಸಿ ಅಭಿವೃದ್ಧಿಗೆ ಪೂರಕವಾಗಿ ಸಹಕಾರ ನೀಡಬೇಕು. ಅಧಿಕಾರ ವಿಕೇಂದ್ರೀಕರಣವನ್ನು ವಿರೋಧಿಸುವವರು ಮತ್ತು ಬೆಂಗಳೂರಿನ ಅಭಿವೃದ್ಧಿ ಒಲ್ಲದವರು ಸಭೆಯನ್ನು ವಿರೋಧಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ(GBA) ಮೊದಲ ಸಭೆಯಲ್ಲಿ ಶುಕ್ರವಾರ ಮಾತನಾಡಿದರು. ಅತಿ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ಸಮಸ್ತ ಜನರಿಗೆ ಸುಗಮ ಆಡಳಿತ, ಸಮರ್ಪಕ‌ ಅಭಿವೃದ್ಧಿಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದು ಐದು ಕಾರ್ಪೋರೇಷನ್ ಗಳು ರಚನೆಯಾಗಿವೆ ಎಂದು ಮುಖ್ಯಮಂತ್ರಿ ಹೇಳಿದರು.

ಬೆಂಗಳೂರಿನ ಜನಸಂಖ್ಯೆ 1.40 ಕೋಟಿ ತಲುಪಿದೆ. ಒಂದು ಕಾರ್ಪೋರೇಷನ್ ನಿಂದ ಇಷ್ಟು ದೊಡ್ಡ ನಗರದ ಸಮರ್ಪಕ ಅಭಿವೃದ್ಧಿ ಬಹಳ ದೊಡ್ಡ ಸವಾಲಿನದ್ದು. ಈ ಚರ್ಚೆ ಹಲವು ವರ್ಷಗಳಿಂದ ಇದ್ದೇ ಇದೆ. ಒಂದಕ್ಕಿಂತ ಹೆಚ್ಚು ಕಾರ್ಪೋರೇಷನ್ ಗಳಿದ್ದರೆ ಅಭಿವೃದ್ಧಿ ಸಾಧ್ಯ ಎನ್ನುವ ಕಾರಣಕ್ಕೆ ಈ ಬಗ್ಗೆ ವರದಿ ಕೊಡಲು ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗಲೇ ಸಮಿತಿ ರಚಿಸಲಾಗಿತ್ತು. ನಂತರ ಬಂದ ಸರ್ಕಾರಗಳು ಈ ದಿಕ್ಕಿನಲ್ಲಿ ಗಮನ ಹರಿಸಲೇ ಇಲ್ಲ. ಹೀಗಾಗಿ ನಮ್ಮ ಸರ್ಕಾರವೇ ಪುನಃ ಅಧಿಕಾರಕ್ಕೆ ಬಂದ ಬಳಿಕ ಸಮಿತಿಯನ್ನು ಪುನರ್ ರಚಿಸಲಾಯಿತು. ಈ ಸಮಿತಿ ವರದಿಯಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದು 5 ನಗರ ಪಾಲಿಕೆಗಳ ರಚನೆಯಾಗಿವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net