

ಬೆಂಗಳೂರು: ( Geetha Shivarajkumar ) ಸ್ಯಾಂಡಲ್ವುಡ್ ನಟ ಶಿವರಾಜ್ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ಕುಮಾರ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇತ್ತೀಚೆಗಷ್ಟೇ ಶಿವರಾಜ್ಕುಮಾರ್ ಅವರು ಅಮೆರಿಕಾದಲ್ಲಿ ಕ್ಯಾನ್ಸರ್ಗೆ ಚಿಕಿತ್ಸೆ ಪಡೆದು ಬಂದಿದ್ದಾರೆ. ಹೀಗಿರುವಾಗಲೇ ಅವರ ಪತ್ನಿ ಗೀತಾ ಶಿವರಾಜ್ಕುಮಾರ್ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಗೀತಾ ಶಿವರಾಜ್ಕುಮಾರ್ ಅವರಿಗೆ ನರದ ಸಮಸ್ಯೆಯಿಂದ ಕತ್ತಿನ ಭಾಗದಲ್ಲಿ ನೋವು ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಈ ಮೊದಲೇ ಅವರು ಇದಕ್ಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಿತ್ತು. ಆದರೆ ಅದು ಸಾಧ್ಯವಾಗಿರಲಿಲ್ಲ. ಕತ್ತಿನ ಭಾಗದಲ್ಲಿ ಶಸ್ತ್ರಚಿಕಿತ್ಸೆ ಆಗಿದೆ ಎಂದು ಅವರ ಆಪ್ತ ವಲಯದವರು ಮಾಹಿತಿ ನೀಡಿದ್ದಾರೆ. ಕುಟುಂಬದ ಕಡೆಯಿಂದ ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬರಬೇಕಿದೆ.