

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಗೀತಾ ಶಿವರಾಜ್ಕುಮಾರ್ ಆಸಕ್ತಿ ಹೊಂದಿದ್ದು, ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ನ ಪ್ರಭಾವಿ ನಾಯಕರೊಂದಿಗೆ ಸಾಕಷ್ಟು ಮಾತಕತೆ ನಡೆಸಿದ್ದಾರೆ ಎಂಬ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ.
ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಇಂದು ಬೆಳಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ನಿವಾಸದಲ್ಲಿ ಭೇಟಿಯಾಗಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಗೀತಾ ಶಿವರಾಜ್ ಕುಮಾರ್ ಮಾತನಾಡುತ್ತಾ, ಶಿವಮೊಗ್ಗ ಲೋಕಾಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ್ದಾರೆ.
'ಶಿವಮೊಗ್ಗ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಯಾವುದೇ ಸಿದ್ಧತೆ ಮಾಡಿಕೊಂಡಿಲ್ಲ. ಪಕ್ಷ, ಅವರು (ಪತಿ ಶಿವರಾಜ್ ಕುಮಾರ್), ಸಹೋದರ ಮಧು ಬಂಗಾರಪ್ಪ ನಿರ್ಧರಿಸಿದಂತೆ ಮುಂದುವರೆಯುತ್ತೇನೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಅವರನ್ನು ಸೌಹಾರ್ಧಯುತವಾಗಿ ಭೇಟಿ ಮಾಡಿದ್ದೇವೆ. ಯಾವುದೇ ರಾಜಕೀಯ ವಿಚಾರಗಳ ಬಗ್ಗೆ ಸ್ಪರ್ಧಿಸಿಲ್ಲ' ಎಂದು ಸ್ಪಷ್ಟಪಡಿಸಿದರು.
2013ರ ವಿಧಾಸಭಾ ಚುನಾವಣೆಯಲ್ಲಿ ಗೀತಾ ಶಿವರಾಜ್ ಕುಮಾರ್ ಅವರು ಜೆಡಿಎಸ್ನಿಂದ ಸ್ಪರ್ಧಿಸಿದ್ದರು. ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಮುಂದಿನ ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಎಂದೇ ಎಲ್ಲೆಡೆ ಚರ್ಚೆಯಾಗುತ್ತಿದೆ.