ಕಾಲಕಾಲಕ್ಕೆ ಆರೋಗ್ಯ ತಪಾಸಣೆಗೆ ಒಳಗಾಗಿರಿ

ಕಾಲಕಾಲಕ್ಕೆ ಆರೋಗ್ಯ ತಪಾಸಣೆಗೆ ಒಳಗಾಗಿರಿ
Published on

ನಂಜನಗೂಡು: ಮನುಷ್ಯ ಆರೋಗ್ಯವಂತನಾಗಿದ್ದರೆ, ಏನು ಬೇಕಾದರೂ ಸಾಧನೆ ಮಾಡಬಹುದು. ಪ್ರತಿಯೊಬ್ಬರೂ ಕಾಲಕಾಲಕ್ಕೆ ತಪಾಸಣೆಗೆ ಒಳಪಡಿಸಿಕೊಳ್ಳಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಟಿ.ಆರ್.ವಿದ್ಯಾಸಾಗರ್ ಹೇಳಿದರು.

ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದಲ್ಲಿ ಭಾನುವಾರ ಸುಯೋಗ್ ಆಸ್ಪತ್ರೆಯ ಸಹಯೋಗದಲ್ಲಿ ಸಾಮೂಹಿಕ ನಾಯಕತ್ವದ ಕರ್ನಾಟಕ ರೈತ ಸಂಘ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ನಮ್ಮ ಜೀವನ ಶೈಲಿ, ದಿನನಿತ್ಯದ ಚಟುವಟಿಕೆಗಳು, ಆಹಾರದ ಪದ್ಧತಿಯಿಂದ ಕಾಯಿಲೆಗಳು ಬರುತ್ತವೆ. ಜೀವನದಲ್ಲಿ ಶಿಸ್ತು ಅಳವಡಿಸಿಕೊಂಡು ಆಹಾರ ಕ್ರಮದಲ್ಲಿ ನಿಯಮಿತವಾಗಿದ್ದರೆ ರೋಗ ಬರುವುದನ್ನು ತಡೆಗಟ್ಟಬಹುದು ಎಂದರು.

ಸುಯೋಗ್ ಆಸ್ಪತ್ರೆಯ ಸಂಸ್ಥಾಪಕ ಡಾ.ಯೋಗಣ್ಣ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ಸೇವೆ ವಾಣಿಜ್ಯಮಯವಾಗಿದೆ. ಆಸ್ಪತ್ರೆಗಳು ಸುಲಿಗೆಯ ತಾಣಗಳಾಗಿವೆ. ಇಂತಹದರಲ್ಲಿ ಸುಯೋಗ್ ಆಸ್ಪತ್ರೆ ಹಳ್ಳಿಗಾಡಿನ ಜನರಿಗೆ ಆರೋಗ್ಯ ಸೇವೆ ಒದಗಿಸಬೇಕು ಎಂಬ ಸಾಮಾಜಿಕ ಕಳಕಳಿಯೊಂದಿಗೆ ಆರೋಗ್ಯ ಉಚಿತ ತಪಾಸಣೆ ನಡೆಸುತ್ತಿದೆ ಎಂದರು.

ಗ್ರಾಪಂ ಅಧ್ಯಕ್ಷ ಕಾಂತರಾಜು, ರೈತ ಸಂಘದ ಜಿಲ್ಲಾ ಪ್ರಧಾನಕಾರ್ಯದರ್ಶಿ ಇಮ್ಮಾವು ರಘು, ತಾಲೂಕು ಅಧ್ಯಕ್ಷ ಸತೀಶ್‌ರಾವ್, ಶಿವಣ್ಣ, ವೆಂಕಟೇಗೌಡ, ಹೆಗ್ಗಡಹಳ್ಳಿ ಮಹದೇವಸ್ವಾಮಿ, ಶಿವಕುಮಾರ್, ಪ್ರಕಾಶ್, ಶೈಲಜಾ, ಶ್ವೇತಾ, ಸುಯೋಗ್ ಆಸ್ಪತ್ರೆಯ ಡಾ.ಪ್ರಭುದೇವ್, ಡಾ.ಲಿಖಿತಾ, ಡಾ.ಅಲೋಕ್‌ಕುಮಾರ್, ಗ್ರಾಪಂ ಸದಸ್ಯ ಮನೋಜ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net