

ಗಾಜಿಯಾಬಾದ್: ರೆಸ್ಟೋರೆಂಟ್ ಸಿಬ್ಬಂದಿಯೊಬ್ಬ ಆಹಾರ ಪ್ಯಾಕಿಂಗ್ ಮಾಡುವ ವೇಳೆ ಉಗುಳಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರೋಪಿಯ ಈ ಕೃತ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಆರೋಪಿಯನ್ನು ಮಾಸೂಮ್ ಎಂದು ಗುರುತಿಸಲಾಗಿದ್ದು, ಉತ್ತರ ಪ್ರದೇಶದ ಗಾಜಿಯಾಬಾದ್‌ನ ಲೋನಿ ಪ್ರದೇಶದಲ್ಲಿ ಸಲಾಮ್ ಚಿಕನ್ ಎಂಬ ರೆಸ್ಟೋರೆಂಟ್ನಲ್ಲಿ ಕೆಲಸ ಮಾಡುತ್ತಿದ್ದ. ಉದ್ದೇಶಪೂರ್ವಕವಾಗಿ ಆಹಾರದ ಪೊಟ್ಟಣಗಳಲ್ಲಿ ಉಗುಳುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದ್ದು, ಕೇವಲ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಈತ ಉಗುಳುತ್ತಿದ್ದ ಎಂಬ ಆರೋಪಗಳು ಕೇಳಿ ಬಂದಿವೆ.
ವಿಡಿಯೋವನ್ನು ಆಧರಿಸಿ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು, ರೆಸ್ಟೋರೆಂಟ್ ಉದ್ಯೋಗಿಯನ್ನು ಬಂಧಿಸಿ ವಿಚಾರಣೆ ಮುಂದುವರೆಸಿದ್ದಾರೆ.(ಏಜೆನ್ಸೀಸ್)