VIDEO | ಜನರಂತೆ ಬೀದಿಯಲ್ಲಿ ತಿರುಗಾಡಿದ ಬೃಹತ್ ಮೊಸಳೆ; ವಿಡಿಯೋ ವೈರಲ್

Untitled design (89)
Published on

ನವದೆಹಲಿ: ದೇಶಾದ್ಯಂತ ಮಳೆಯಿಂದ ಕೆರೆ, ನದಿ, ಹೊಳೆಗಳು ಮೈದುಂಬಿ ಹರಿಯುತ್ತಿದ್ದು, ಹಲವು ರಸ್ತೆಗಳು ಜಲಾವೃತಗೊಂಡಿದೆ. ಇದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಈ ಮಧ್ಯೆ ಮಳೆಯ ನೀರು ನಗರ ಪ್ರದೇಶದಲ್ಲಿ ವಾಸಿಸುವ ಜನರಿಗೆ ಸಾಕಷ್ಟು ತೊಂದರೆಯನ್ನು ಉಂಟು ಮಾಡಿರುವುದು ಇದೀಗ ಮುನ್ನೆಲೆಗೆ ಬಂದಿದೆ.

ಸದ್ಯ ಭಾರೀ ಮಳೆಯ ಹಿನ್ನೆಲೆ ಕೋಟಾ ನಗರದ ನಿವಾಸಿಗಳಿಗೆ ಮನೆಯಿಂದ ಹೊರಬಾರದ ಪರಿಸ್ಥಿತಿ ಎದುರಾಗಿದ್ದು, ಬೃಹತ್ ಗಾತ್ರದ ಮೊಸಳೆಯೊಂದು ರಸ್ತೆಯ ಮೇಲೆ ಓಡಾಡುವ ದೃಶ್ಯ ಕಂಡು ಬೆಚ್ಚಿಬಿದ್ದಿದ್ದಾರೆ. ಮೊಸಳೆ ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿರುವ ದೃಶ್ಯ ಇದೀಗ ಕ್ಯಾಮರಾ ಕಣ್ಣಿನಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದೆ. ಮೊಸಳೆ ನೋಡಿ ಆತಂಕ ವ್ಯಕ್ತಪಡಿಸಿದ ಸ್ಥಳೀಯ ನಿವಾಸಿಗಳು, ಈ ಬಗ್ಗೆ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ,(ಏಜೆನ್ಸೀಸ್). 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net