

ಬೆಂಗಳೂರು:
ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡುವ ಬಗ್ಗೆ ವಿಕಾಸಸೌಧದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಾರ್ಮಿಕ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಈಗಾಗಲೇ ಜಾರಿ ಮಾಡಿರುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡುವುದು ನಮ್ಮ ಸಾಮಾಜಿಕ ಬದ್ಧತೆಯಾಗಿದೆ. ಆದ್ದರಿಂದ ಈ ನಿಟ್ಟಿನಲ್ಲಿ ಅಧಿಕಾರಿಗಳು ಮುತುವರ್ಜಿ ವಹಿಸಿ ಕೆಲಸ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಆಯುಕ್ತ ಗೋಪಾಲಕೃಷ್ಣ, ಕಾರ್ಮಿಕ ಕಲ್ಯಾಣ ಆಯುಕ್ತ ಆಂಜನೇಯ, ಅಪರ ಕಾರ್ಮಿಕ ಆಯುಕ್ತ ಡಾ.ಮಂಜುನಾಥ್, ಮತ್ತು ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.