ತಾಯಿ ಮನೆ ಬಿಟ್ಟು ಹೋದಳು, ನಡೆಯಲಾರದಂತಹ ಪರಿಸ್ಥಿತಿ ತಂದೆಯದು: ಕೊನೆಗೆ ಮಗಳು ಮಾಡಿದ್ದಿಷ್ಟು..

girl
ಸಾಂದರ್ಭಿಕ ಚಿತ್ರ
Published on

ನಾಗರಕರ್ನೂಲ್: 16 ವರ್ಷದ ಬಾಲಕಿಯೊಬ್ಬಳು ತನ್ನ ಕುಟುಂಬವನ್ನು ಪೋಷಿಸಲು ಸಾಧ್ಯವಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಾಗರ್ ಕರ್ನೂಲ್ ಜಿಲ್ಲೆಯ ಬಿಜನಪಲ್ಲಿ ಮಂಡಲದ ಖಾನಾಪುರದಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಕಲ್ಪನಾ ಎಂದು ಗುರುತಿಸಲಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗ್ರಾಮದ ಸುಂಕರಿ ಬಾಲಸ್ವಾಮಿ ಮತ್ತು ಯಾದಮ್ಮ ದಂಪತಿಗಳಿಗೆ ಕಲ್ಪನಾ ಮತ್ತು ಚಂದನಾ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದು, ನಾಲ್ಕು ವರ್ಷಗಳ ಹಿಂದೆ ಯಾದಮ್ಮ ಯಾರಿಗೂ ಹೇಳದೆ ಮನೆ ಬಿಟ್ಟು ಹೋಗಿದ್ದಾಳೆ. ಅಂದಿನಿಂದ ತಂದೆ ಬಾಲಸ್ವಾಮಿ ತನ್ನ ಇಬ್ಬರು ಹೆಣ್ಣು ಮಕ್ಕಳ ಯೋಗಕ್ಷೇಮವನ್ನು ನೋಡಿಕೊಳ್ಳುತ್ತಿದ್ದನು.

ಆದರೆ ನಾಲ್ಕು ತಿಂಗಳ ಹಿಂದೆ ಕೆಲಸಕ್ಕೆ ಹೋಗಿದ್ದ ಬಾಲಸ್ವಾಮಿ ಪೈನ್ ಮರದಿಂದ ಬಿದ್ದು ಹಾಸಿಗೆ ಹಿಡಿದಿದ್ದಾನೆ. ಬಳಿಕ ಹಿರಿಯ ಮಗಳು ಕಲ್ಪನಾ ಹತ್ತನೇ ತರಗತಿ ಮುಗಿಸಿದ್ದು, ಕುಟುಂಬ ನಿರ್ವಹಣೆಯ ಹೊಣೆ ಹೊತ್ತು ಕೂಲಿ ಕೆಲಸಕ್ಕೆ ಹೋಗುತ್ತಿದ್ದಳು. ತಂಗಿ ಚಂದನಾ ಇನ್ನು ಶಾಲೆಯಲ್ಲಿ ಓದುತ್ತಿದ್ದಾಳೆ. ಏನಾಯ್ತು ಏನೊ ಕಲ್ಪನಾ ಇಂದು ಬೆಳಿಗ್ಗೆ ಮನೆಯಲ್ಲಿಯೇ ನೇಣು ಬಿಗಿದುಕೊಂಡಿದ್ದಾಳೆ.

ಇದನ್ನು ಗಮನಿಸಿದ ಕುಟುಂಬಸ್ಥರು ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಆಕೆ ಆಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಈ ಮಧ್ಯೆ ಅಕ್ಕನ ಸಾವಿನಿಂದ ಆಘಾತಕ್ಕೊಳಗಾಗಿರುವ ತಂಗಿಯ ಆರೋಗ್ಯ ಸ್ಥಿತಿ ಹದಗೆಟ್ಟಿದೆ.(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net