7ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಬಾಲಕಿ ಕುಟುಂಬಸ್ಥರು

rape accused house fire
Published on

ತೆಲಂಗಾಣ: 7ನೇ ತರಗತಿ ವಿದ್ಯಾರ್ಥಿನಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ (Girl Raped) ಎಸಗಿದ್ದು, ಘಟನೆಯ ಬಗ್ಗೆ ಮಾಹಿತಿ ಪಡೆದ ಪೋಷಕರು ಆರೋಪಿಯ ಮನೆಯನ್ನು ಗುರುತಿಸಿ, ಆಕ್ರೋಶದಿಂದ ಬೆಂಕಿ ಹಚ್ಚಿದ ಘಟನೆ ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ ಸಂಭವಿಸಿದೆ.

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದ್ದೇ ಆದರೂ ಕುಟಂಬಸ್ಥರ ಪ್ರತಿಭಟನೆ ತಡೆಯಲು ಸಾಧ್ಯವಾಗಲಿಲ್ಲ. ಪೊಲೀಸರ ಉಪಸ್ಥಿತಿಯ ಹೊರತಾಗಿಯೂ, ಬಾಲಕಿಯ ಪೋಷಕರು ಮತ್ತು ಸಂಬಂಧಿಕರು ಆರೋಪಿಯ ಮನೆ ಮತ್ತು ಕಾರಿಗೆ ಬೆಂಕಿ ಹಚ್ಚಿ, ಸುಟ್ಟುಹಾಕಿದ್ದಾರೆ. ಈ ವೇಳೆ ಪರಿಸ್ಥಿತಿ ಕೈಮೀರಿ ಹೋಗಬಹುದು ಎಂದು ಯೋಚಿಸಿದ ಪೊಲೀಸರು ಅಂತಿಮವಾಗಿ ಗುಂಪನ್ನು ಚದುರಿಸಿ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಸಿದ್ದಿಪೇಟೆ ಪೊಲೀಸ್ ಕಮಿಷನರ್ ಕೂಡ ಸ್ಥಳಕ್ಕೆ ಧಾವಿಸಿ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದ್ದು, ಉದ್ವಿಗ್ನತೆಯನ್ನು ನಿಯಂತ್ರಣಗೊಳಿಸಿ ಶಾಂತಿ ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದೇ ವೇಳೆ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಸಂತ್ರಸ್ತೆಯ ಕುಟುಂಬಸ್ಥರು ಹಾಗೂ ಸ್ಥಳೀಯರು ಆಗ್ರಹಿಸಿದ್ದು, ನ್ಯಾಯ ದೊರಕಿಸಿಕೊಡಿ ಎಂದು ಪಟ್ಟು ಹಿಡಿದಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net