

ಜಾರ್ಖಂಡ್: ಮದುವೆಯಾಗಬೇಕಿದ್ದ ಯುವಕನೊಂದಿಗೆ ವಾಕಿಂಗ್ ತೆರಳಿದ್ದಾಗ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ನಲ್ಲಿ ನಡೆದಿದೆ. ಜಾರ್ಖಂಡ್ನ ಬಳಿ ಗುರುವಾರ ಸಂಜೆ ಇಬ್ಬರೂ ವಾಕಿಂಗ್ ಮಾಡುತ್ತಿರುವಾಗ ಘಟನೆ ನಡೆದಿದೆ.
ಅತ್ಯಾಚಾರ ನಡೆಸಿದ ಗುಂಪು ಆಕೆಯ ಬಳಿ ಇದ್ದ ಬ್ಯಾಗ್ ಹಾಗೂ ಮೊಬೈಲ್ ಫೋನ್ ಅನ್ನು ದೋಚಿದ್ದು, ಆಕೆಯನ್ನ ನಿರ್ಜನ ಪ್ರದೇಶದಲ್ಲಿ ಬಿಟ್ಟಿದ್ದಾರೆ.
ಆಕೆಯ ಸಂಗಾತಿ ಹೇಗೋ ತಪ್ಪಿಸಿಕೊಂಡು ಪೊಲೀಸರಿಗೆ ಕರೆ ಮಾಡಿದ್ದಾರೆ, ತಕ್ಷಣವೇ ಪೊಲೀಸ್ ತಂಡವನ್ನು ಸ್ಥಳಕ್ಕೆ ಕಳುಹಿಸಲಾಯಿತು ಮತ್ತು ಆಕೆಗೆ ತ್ವರಿತ ನೆರವು ನೀಡಿದ ನಂತರ ಆಕೆಯನ್ನು ಚಿಕಿತ್ಸೆಗಾಗಿ ಸದರ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಎಸ್ಪಿ ಅಶುತೋಷ್ ಶೇಖರ್ ತಿಳಿಸಿದ್ದಾರೆ.
ಯುವತಿಯನ್ನ ನಿರ್ಜನ ಪ್ರದೇಶದಲ್ಲಿ ಬಿಟ್ಟ ಆರೋಪಿಗಳು, ಆಕೆಯ ಬಳಿಯಿದ್ದ ಮೊಬೈಲ್ ಫೋನ್ ಮತ್ತು ಬ್ಯಾಗನ್ನ ದೋಚಿದ್ದಾರೆ.
ಪ್ರಕರಣದ ಕುರಿತಂತೆ ತನಿಖೆ ನಡೆಸಿದ್ದ ಪೊಲೀಸರು ಶುಕ್ರವಾರ ಕಿಟಗುತ್ತು ಗ್ರಾಮದ ಐವರನ್ನು ಬಂಧಿಸಿದ್ದಾರೆ.
ಪೊಲೀಸರು ಆರೋಪಿಗಳಿಂದ ಬ್ಯಾಗ್ ಮತ್ತು ಮೊಬೈಲ್ ಫೋನ್ ಅನ್ನು ಸಹ ವಶಪಡಿಸಿಕೊಂಡಿದ್ದಾರೆ. ಸದ್ಯ ಸಾಮೂಹಿಕ ಅತ್ಯಾಚಾರವೆಸಗಿದ ಐವರನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದ ಕುರಿತಂತೆ ಐವರು ಆರೋಪಿಗಳು ತನಿಖೆ ಮುಂದುವರೆಸಿದ್ದಾರೆ.