

Mysuru: ಮೈಸೂರಿನಲ್ಲಿ ದಸರಾಗೆ ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ ಪ್ರಕರಣದ ಆರೋಪಿಯನ್ನು ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಪೊಲೀಸರು ಗುರುವಾರ(ಅ. 09) ಬಂಧಿಸಿದ್ದಾರೆ. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನ ಆರೋಪಿ ಗುಂಡು ಹೊಡೆದಿದ್ದಾರೆ.
ಮೈಸೂರಿನ ಸಿದ್ದಲಿಂಗನಪುರದ ಕಾರ್ತಿಕ್ ಬಂಧಿತ ಆರೋಪಿ. ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿ ಆರೋಪಿಯನ್ನು ಗುರುತು ಹಿಡಿದಿದ್ದ ಪೊಲೀಸರು ಹುಡುಕಾಟ ನಡೆಸಿದ್ದರು. ಕೊಳ್ಳೇಗಾಲ ಕಡೆ ಹೋಗಿರುವ ಸುಳಿವು ಸಿಕ್ಕಿದ್ದ ಹಿನ್ನೆಲೆ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಹುಡುಕಾಟ ನಡೆದಿತ್ತು. ಈ ವೇಳೆ ಕೊಳ್ಳೇಗಾಲ ಪಟ್ಟಣದ ಕಾರ್ ಸ್ಟ್ಯಾಂಡ್ ನಲ್ಲಿ ಮಲಗಿದ್ದ ಕಾರ್ತಿಕ್ ಸಿಕ್ಕಿಬಿದ್ದಿದ್ದಾನೆ.
ತಕ್ಷಣ ಈತನನ್ನು ಬಂಧಿಸಿದ ಪೊಲೀಸರು ಮೈಸೂರಿಗೆ ಕರೆದುಕೊಂಡು ಹೋಗ್ತಿದ್ದರು. ಆಧರೆ ಈ ವೇಳೆ ತಪ್ಪಿಸಿ ಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿಕ್ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಸದ್ಯ ಗಾಯಾಳು ಆರೋಪಿಯನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದಾರೆ.