ಉಳುಮೆ ಮಾಡುತ್ತಿರುವವರಿಗೆ ಸಾಗುವಳಿ ಪತ್ರ ನೀಡಿ

manavi
ಅರಣ್ಯ ಹಕ್ಕು ಕಾಯ್ದೆಯಡಿ ಮೇಲ್ಮನವಿ ಸಲ್ಲಿಸಲು ಅವಕಾಶ ಕೋರಿ ಕೋರಿ ಸೊರಬ ತಾಲೂಕು ಬೆದವಟ್ಟಿ, ಬಿಳವಾಣಿ ಗ್ರಾಮದ ರೈತರು ಸಿದ್ದಲಿಂಗ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.
Published on

ಶಿವಮೊಗ್ಗ: ಸೊರಬ ತಾಲೂಕು ಕಸಬಾ ಹೋಬಳಿ ಬೆದವಟ್ಟಿ, ಬಿಳವಾಣಿ ಗ್ರಾಮದ ಸರ್ವೇ ನಂ.91ರಲ್ಲಿ ಹಲವು ವರ್ಷಗಳಿಂದ ಅರಣ್ಯ ಜಮೀನಿನಲ್ಲಿ ಉಳುಮೆ ಮಾಡುತ್ತಿರುವವರಿಗೆ ಸಾಗುವಳಿ ಪತ್ರ ನೀಡಬೇಕು. ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಬೇಕೆಂದು ಆಗ್ರಹಿಸಿ ಸಾಗುವಳಿದಾರರು ಮಂಗಳವಾರ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.

ಮೂರು ತಲೆಮಾರುಗಳಿಂದ ಅಲ್ಲಿ ಸಾಗುವಳಿ ಮಾಡಲಾಗುತ್ತಿದೆ. ಇದೇ ಭೂಮಿ ನಮ್ಮ ಕುಟುಂಬ ನಿರ್ವಹಣೆಗೆ ಆಧಾರವಾಗಿದೆ. ಅರಣ್ಯಹಕ್ಕು ಕಾಯ್ದೆಯಡಿ ಹಕ್ಕುಪತ್ರ ನೀಡುವಂತೆ ಅರ್ಜಿ ಸಲ್ಲಿಸಿದ್ದೇವೆ. ಗ್ರಾಮ ಸಮಿತಿ ಅದನ್ನು ಅನುಮೋದಿಸಿ ಮುಂದಿನ ಹಂತಕ್ಕೆ ರವಾನಿಸಿತ್ತು. ಆದರೆ ಉಪವಿಭಾಗಾಧಿಕಾರಿ ಹಂತದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ದೂರಿದರು.
ಅರ್ಜಿ ಜತೆಗೆ ಭೂ ಮಂಜೂರಾತಿಗೆ ಅವಶ್ಯವಿರುವ ಎಲ್ಲ ದಾಖಲೆಗಳನ್ನು ಲಗತ್ತಿಸಲಾಗಿತ್ತು. ಗ್ರಾಮದಲ್ಲಿ ಶೇ.90 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿದ್ದಾರೆ. ಆದರೂ ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸಿ ಅರ್ಜಿ ತಿರಸ್ಕರಿಸಲಾಗಿದೆ. ಹೀಗಾಗಿ 190 ಕುಟುಂಬಗಳಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಬೇಕೆಂದು ಬೆದವಟ್ಟಿ, ಬಿಳವಾಣಿ ಗ್ರಾಮಸ್ಥರು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net