

ಸೋಮವಾರಪೇಟೆ : ಕೊಡವ ಸಮಾಜದ ಸಮುದಾಯ ಭವನ ಪೂರ್ಣಗೊಳಿಸಲು ಅನುದಾನ ಬಿಡುಗಡೆ ಮಾಡುವಂತೆ ಗೋಣಿಕೊಪ್ಪ ಕೊಡವ ಸಾಂಸ್ಕೃತಿಕ ಕೇಂದ್ರದ ಆಡಳಿತ ಮಂಡಳಿ ಮುಖ್ಯಮಂತ್ರಿ ಕಾನೂನು ಸಲಹೆಗಾರರೂ ಆದ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.
ಬುಧವಾರ ಮುಖ್ಯಮಂತ್ರಿ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ನಿಯೋಗ ಸಮುದಾಯ ಭವನದ ಕಾಮಗಾರಿಗಳಿಗೆ 1.5 ಕೋಟಿ ರೂ. ವೆಚ್ಚ ಮಾಡಲಾಗಿದೆ. ಅಂದಾಜು 8.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕಟ್ಟಡಕ್ಕೆ ಹಣಕಾಸಿನ ತೊಂದರೆ ಎದುರಾಗಿದ್ದು, ಕಾಮಗಾರಿ ಸ್ಥಗಿತಗೊಂಡಿದೆ. ಸಮುದಾಯ ಭವನ ಪೂರ್ಣಗೊಳಿಸಲು 8.5 ಕೋಟಿ ರೂ. ಅನುದಾದ ಅವಶ್ಯಕತೆ ಇದ್ದು, ಅನುದಾನ ಬಿಡುಗಡೆ ಮಾಡಬೇಕೆಂದು ನಿಯೋಗ ಮನವಿ ಮಾಡಿತು.
ಆಡಳಿತ ಮಂಡಳಿ ಅಧ್ಯಕ್ಷ ಎ.ಸಿ.ಪೂಣಚ್ಚ, ಉಪಾಧ್ಯಕ್ಷ ಸಿ.ಪಿ.ಪೂಣಚ್ಚ, ಕಾರ್ಯದರ್ಶಿ ಸಿ.ಡಿ. ಮಾದಪ್ಪ, ಜಂಟಿ ಕಾರ್ಯದರ್ಶಿ ರೀಟಾ ದೇಚಮ್ಮ, ಖಜಾಂಚಿ ಕೆ.ಸಿ. ಬಿದ್ದಪ್ಪ, ನಿರ್ದೇಶಕಿ ಬಿದ್ದಂಡ ಪ್ರೇಮಾ, ಸಮಾಜದ ಕಾಯಂ ನಿರ್ದೇಶಕ ಹಾಗೂ ಪತ್ರಕರ್ತ ಅಜ್ಜಿನಿಕಂಡ ಮಹೇಶ್ ನಾಚಯ್ಯ ಉಪಸ್ಥಿತರಿದ್ದರು.