

ಭದ್ರಾವತಿ: ಕಟ್ಟಡ ನಿರ್ಮಾಣ, ಇತರ ಕಾರ್ಮಿಕರು ಸರ್ಕಾರಿ ಸೌಲಭ್ಯ ಸದ್ಬಳಕೆ ಮಾಡಿಕೊಂಡು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ನಗರಸಭೆ ಸದಸ್ಯ ಬಿ.ಕೆ.ಮೋಹನ್ ಹೇಳಿದರು.
ಹಳೇನಗರದ ವೀರಶೈವ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಆಯೋಜಿಸಿದ್ದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸಾಧನ ಸಲಕರಣೆಗಳ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಷ್ಟಪಟ್ಟು ದುಡಿಮೆ ಮಾಡುವ ಕಾರ್ಮಿಕರು ಶ್ರಮದ ಅರಿವು ಹೊಂದಬೇಕು. ದುಡಿಯವ ಹಣದಲ್ಲಿ ಒಂದಷ್ಟು ಹಣವನ್ನು ಭವಿಷ್ಯಕ್ಕಾಗಿ ಉಳಿತಾಯ ಮಾಡಬೇಕು. ಶಾಸಕರು, ಕಾರ್ಮಿಕರಿಗೆ ಹೆಚ್ಚು ಸೌಲಭ್ಯ ಕೊಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ಶಾಸಕ ಬಿ.ಕೆ.ಸಂಗಮೇಶ್ವರ್, ನಗರಸಭೆ ಪ್ರಭಾರ ಅಧ್ಯಕ್ಷ ಎಂ.ಮಣಿ, ಶಿಮುಲ್ ನಿರ್ದೇಶಕ ಎಸ್.ಕುಮಾರ್, ಮಾಜಿ ಉಪಾಧ್ಯಕ್ಷ ಚನ್ನಪ್ಪ, ಸೂಡಾ ಸದಸ್ಯ ಎಚ್.ರವಿಕುಮಾರ್, ಕಾರ್ಮಿಕ ಮುಖಂಡ ವಿ.ವಿನೋದ್, ಪ್ರಮುಖರಾದ ಸಿ.ಎಂ ಖಾದರ್, ಎಸ್.ಮಣಿಶೇಖರ್, ಬಿ.ಕೆ.ಜಗನ್ನಾಥ, ಬಸವರಾಜ, ಗೀತಾ, ಅನುಸುಧಾ, ಕೆ.ಸುದೀಪ್‌ಕುಮಾರ್, ಚಂದ್ರಶೇಖರ್, ಸುಂದರ್ ಬಾಬು, ಅಭಿಲಾಷ್, ಎಂ.ಎಸ್.ಸುಧಾಮಣಿ, ಡಾ. ವಿಜಯಾದೇವಿ ಇದ್ದರು.