ಶಾಲೆಗಳ ಅಭಿವೃದ್ಧಿಗೆ ಆದ್ಯತೆ ನೀಡುವೆ

school
ಹೊಸನಗರ ಪಟ್ಟಣದ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಸಾಂಸ್ಕೃತಿಕ ಸಮ್ಮಿಲನ ಕಾರ್ಯಕ್ರಮವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು.
Published on

ಹೊಸನಗರ: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ಜತೆಗೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡುತ್ತೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯ ಚಿಣ್ಣರ ಸಾಂಸ್ಕೃತಿಕ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯ ಸರ್ಕಾರಿ ಶಾಲೆಗಳ ಪೈಕಿ ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಎರಡನೇ ಶಾಲೆ ಇದಾಗಿದೆ ಎಂದರು.

ಈ ಶಾಲೆಯ ಶೈಕ್ಷಣಿಕ ಪ್ರಗತಿಗೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರ ನೀಡಲಿದ್ದೇನೆ. ಅಲ್ಲದೆ ಸರ್ಕಾರಿ ಶಾಲೆಯಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ. ಇದಕ್ಕೆ ಇಲ್ಲಿನ ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಶಿಕ್ಷಕರು ಮತ್ತು ಪಾಲಕರ ಸಹಕಾರ ಶಾಲೆಯೊಂದಿಗೆ ಉತ್ತಮವಾಗಿದೆ ಎಂದು ಹೇಳಿದರು.

ಪಪಂ ಅಧ್ಯಕ್ಷ ನಾಗಪ್ಪ, ಬಿಇಒ ಎಚ್.ಆರ್.ಕೃಷ್ಣಮೂರ್ತಿ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ್ ನೇರಲೆ, ಪಪಂ ಸದಸ್ಯರು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net