ದಾನಪತ್ರದ ಮೂಲಕ ಆಸ್ತಿ ಕೊಡುವುದುತಪ್ಪೆಂದು ಯಾವ ಕಾನೂನು ಹೇಳಿದೆ?

siddaramaiah
Published on

ಬೆಂಗಳೂರು: ನಿಮ್ಮ ಪತ್ನಿಗೆ ಅವರ ಅಣ್ಣ ನೀಡಿದ ದಾನವನ್ನು ತಿರಸ್ಕರಿಸಬೇಕಿತ್ತು. ಅಕ್ಸೆಪ್ಟ್ ಮಾಡಬಾರದಿತ್ತು ಎಂಬುದು ಕೆಲವರ ವಾದ. ನಾವೆಷ್ಟೆ ಪ್ರಗತಿಪರವಾಗಿ ಯೋಚನೆ ಮಾಡಿದರೂ, ಊಟ ಬಟ್ಟೆಗೆ ಯಾವ ಸಮಸ್ಯೆ ಇಲ್ಲದಿದ್ದರೂ ಸಹ ತವರುಮನೆ ಎನ್ನುವುದು ಎಂದೂ ತೀರದ ಮೋಹವಾಗಿರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿ ವರ್ಷ ತವರುಮನೆಯವರು ಕೊಡುವ ಅರಿಶಿನ ಕುಂಕುಮವೆ ಹೆಣ್ಣುಮಕ್ಕಳಿಗೆ ಅತಿ ದೊಡ್ಡ ಭಾವನಾತ್ಮಕ ಸಂಗತಿಯಾಗಿರುತ್ತದೆ. ಹಾಗಾಗಿ ತವರು ಮನೆಯವರು ಕೊಟ್ಟ ಉಡುಗೊರೆಯನ್ನು ತಿರಸ್ಕರಿಸು ಎಂದು ಜಬರ್ದಸ್ತು ಮಾಡಿ ಹೇಳುವಷ್ಟು ಅಸೂಕ್ಷ್ಮತೆ ಇರಲಿಲ್ಲ ನನಗೆ ಎಂದಿದ್ದಾರೆ.

ಅಣ್ಣ-ತಮ್ಮಂದಿರು, ತಂದೆ-ತಾಯಂದಿರು ತಮ್ಮ ಹೆಣ್ಣು ಮಕ್ಕಳಿಗೆ ದಾನಪತ್ರದ ಮೂಲಕ ಆಸ್ತಿ ಕೊಡುವುದು ತಪ್ಪು ಎಂದು ದೇಶದ ಯಾವ ಕಾನೂನು ಹೇಳಿದೆ? ಕಾನೂನು ಹೋಗಲಿ, ಕರ್ನಾಟಕದ ಸಂಸ್ಕೃತಿಯಾದರೂ ಇದನ್ನು ತಪ್ಪು ಎಂದು ಭಾವಿಸಿದೆಯೆ? ತಪ್ಪು ಎಂದು ನಾಡಿನ ಹೆಣ್ಣು ಮಕ್ಕಳು, ಜನರು ಹೇಳಿದರೆ ನಾನು ಒಪ್ಪುತ್ತೇನೆ. ಸಂಸ್ಕೃತಿಯ ಬಗ್ಗೆ ಬಹಳ ಮಾತನಾಡುವ ಬಿಜೆಪಿಯವರು ಮಾತ್ರ ಇದನ್ನು ತಪ್ಪು ಎನ್ನುತ್ತಾರೆ. ಇದು ದುರಂತ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net