ಸಂವಿಧಾನ ರಕ್ಷಣೆಗೆ ಮುಂದಾಗಿ

15 TKE 2
ತರೀಕೆರೆಯಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಎಸಿ ಡಾ. ಕೆ.ಜೆ.ಕಾಂತರಾಜ್ ಉದ್ಘಾಟಿಸಿದರು. ಪರಮೇಶ್, ವಿ.ಎಸ್.ರಾಜೀವ್, ಎಸ್.ಗೀತಾ, ಟಿ.ಗೋವಿಂದಪ್ಪ, ಮಂಜುನಾಥ್ ಇತರರಿದ್ದರು.
Published on

ತರೀಕೆರೆ: ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ ವಿಶ್ವ ಶ್ರೇಷ್ಠ ಸಂವಿಧಾನ ಅಡಿಪಾಯ ಎಂದು ಎಸಿ ಡಾ. ಕೆ.ಜೆ.ಕಾಂತರಾಜ್ ಬಣ್ಣಿಸಿದರು.

ಪಟ್ಟಣದ ಬಾಲಕರ ಪದವಿಪೂರ್ವ ಕಾಲೇಜು ಮೈದಾನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಭಾರತದ ಸಂವಿಧಾನ ಗ್ರಾಂಥಿಕವಾಗಿ ಸುರಕ್ಷಿತವಾಗಿದೆ. ಸಂವಿಧಾನ ರಕ್ಷಣೆಗೆ ಯುವ ಜನತೆ ಮುಂದಾಗಬೇಕು. ಅದರ ಮೌಲ್ಯಗಳನ್ನು ಅರಿತುಕೊಳ್ಳಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ದಿನಾಚರಣೆ ಮಾಡಲು ಆದೇಶಿರುವುದರಿಂದ ಸಂವಿಧಾನದ ಮಹತ್ವ ಪ್ರತಿಯೊಬ್ಬರೂ ತಿಳಿದುಕೊಳ್ಳಲು ಸಹಕಾರಿಯಾಗಿದೆ ಎಂದರು.
ಪುರಸಭೆ ಅಧ್ಯಕ್ಷ ಪರಮೇಶ್ ಮಾತನಾಡಿ, ಪ್ರಜಾಪ್ರಭುತ್ವದ ರಕ್ಷಣೆ ನಮ್ಮೆಲ್ಲರ ಹೊಣೆ. ಸಂವಿಧಾನದ ಆಶಯ ಈಡೇರಿಸುವ ಕಾರ್ಯ ಭಾರತೀಯರಾದ ನಮ್ಮಿಂದ ಆಗಬೇಕು ಎಂದು ಹೇಳಿದರು.
ತಹಸೀಲ್ದಾರ್ ವಿ.ಎಸ್.ರಾಜೀವ್, ತಾಪಂ ಇಒ ಎಸ್.ಗೀತಾ, ಬಿಇಒ ಟಿ.ಗೋವಿಂದಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್, ಪುರಸಭೆ ಸದಸ್ಯರಾದ ಟಿ.ದಾದಾಪೀರ್ ಟಿ.ಎಂ.ಭೋಜರಾಜ್, ಮಾಜಿ ಅಧ್ಯಕ್ಷ ಎಂ.ನರೇಂದ್ರ, ಮುಖ್ಯಾಧಿಕಾರಿ ಎಚ್.ಪ್ರಶಾಂತ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net