ಮಹಿಳಾ ಮೀಸಲಾತಿ ಮಸೂದೆ; ಇದನ್ನು ಜಾರಿಗೊಳಿಸಲು ದೇವರು ನನ್ನನ್ನು ಆಯ್ಕೆ ಮಾಡಿದ್ದಾರೆ: ಪ್ರಧಾನಿ ಮೋದಿ

Untitled design - 2023-09-19T153129.185
Published on

ನವದೆಹಲಿ: ಇಂದು ನೂತನ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಸಂಸದರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸದನದ ಮೊದಲ ದಿನದಂದು ಮಹಿಳಾ ಮೀಸಲಾತಿ ಮಸೂದೆ ಮಂಡನೆ ಮಾಡಿದ್ದಾರೆ. ಇದನ್ನು ಜಾರಿಗೊಳಿಸಲು ಭಗವಂತ ನನ್ನನ್ನು ಆಯ್ಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಪ್ರಸ್ತುತ ಮಹಿಳಾ ಮೀಸಲಾತಿ ಮಸೂದೆಯನ್ನು 'ನಾರಿ ಶಕ್ತಿ ವಂದನ್ ಅಧಿನಿಯಂ' ಎಂದು ಕರೆಯಲಾಗುತ್ತದೆ. ತಮ್ಮ ಭಾಷಣದಲ್ಲಿ ಮಹಿಳಾ ಕೋಟಾದ ಬಗ್ಗೆ ಮಾತನಾಡಿದ ಪ್ರಧಾನಿ, "ಇದನ್ನು ಜಾರಿಗೊಳಿಸಲು ದೇವರು ನನ್ನನ್ನು ಆಯ್ಕೆ ಮಾಡಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಹಲವಾರು ಬಾರಿ ಮಂಡಿಸಲಾಗಿತ್ತು. ಆದ್ರೆ, ಹಲವು ಬಾರಿ ಇದಕ್ಕೆ ತಡೆ ಎದುರಾಗಿತ್ತು" ಎಂದು ಹೇಳಿದರು.

"ಮಸೂದೆಯನ್ನು ಅಂಗೀಕರಿಸಲು ಸಾಕಷ್ಟು ಬಹುಮತ ಇರಲಿಲ್ಲ ಮತ್ತು ಹಲವು ಕಾರಣಗಳಿಂದ ಈ ಕನಸು ಅಪೂರ್ಣವಾಗಿತ್ತು. ಆದ್ರೆ, ಇಂದು ದೇವರೇ ಇದನ್ನು ಮುಂದಕ್ಕೆ ಕೊಂಡೊಯ್ಯಲು ನನಗೆ ಅವಕಾಶ ನೀಡಿದ್ದಾರೆ. ನಮ್ಮ ಸರ್ಕಾರ ಇಂದು ಉಭಯ ಸದನಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಕುರಿತು ಹೊಸ ಮಸೂದೆಯನ್ನು ತರುತ್ತಿದೆ" ಎಂದು ಹೊಸ ಸಂಸತ್​ನಲ್ಲಿ ಪ್ರಧಾನಿ ಮೋದಿ ಹೇಳಿದರು,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net