

ಬೆಂಗಳೂರು: ಇಂದು ಚಿನ್ನದ ಬೆಲೆ ಕೊಂಚ ಇಳಿಕೆ ಕಂಡಿದೆ. ನೀವು ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್ ಮಾಡಿದ್ದೀರಾ?.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ..? ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,150 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60.120 ರೂ.
ಬೆಳ್ಳಿ ಬೆಲೆ 1 ಕೆಜಿ: 75,500 ರೂ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,300 ರೂಪಾಯಿ ಇತ್ತು. ಆದರೆ ಇಂದು 55,150 ರೂಪಾಯಿ ಆಗಿದೆ. ಇಂದು ಬರೋಬ್ಬರಿ 150 ರೂ. ಇಳಿಕೆಯಾಗಿದೆ. ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60.220 ರೂಪಾಯಿ ಇತ್ತು. ಆದರೆ ಇಂದು 60.160 ರೂಪಾಯಿ ಆಗಿದೆ. ಇಂದು ಬರೋಬ್ಬರಿ 160 ರೂ. ಹೆಚ್ಚಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಬೆಂಗಳೂರು: 55,150 ರೂ.
ಮುಂಬೈ: 55,150 ರೂ.
ದೆಹಲಿ: 55,450 ರೂ
ಕೇರಳ: 55,150 ರೂ.
ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತವಾಗಿ ಭರ್ಜರಿ ಏರಿಕೆ ಕಂಡಿವೆ. ಭಾರತ ಸೇರಿದಂತೆ ಎಲ್ಲೆಡೆ ಚಿನ್ನದ ಬೆಲೆ ಗಮನಾರ್ಹವಾಗಿ ಹೆಚ್ಚಳವಾಗಿದೆ. ನಿನ್ನೆ ಮೊನ್ನೆ ಏರಿಕೆಯಾಗಿದ್ದ ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ತಜ್ಞರು ನಿರೀಕ್ಷಿಸಿದಂತೆ ಈ ಏರಿಕೆ ಇನ್ನೂ ದೀರ್ಘಕಾಲ ಮುಂದುವರಿಯುವ ಸಾಧ್ಯತೆ ಇದೆ.