

Gold Price: ಕಳೆದ ಐದು ದಿನಗಳಿಗೆ ಹೋಲಿಕೆ ಮಾಡಿ ನೋಡುವುದಾದರೆ ಇಂದು ಚಿನ್ನದ ಬೆಲೆಯಲ್ಲಿ ದಿಢೀರ್ ಹಾಗೂ ಭಾರೀ ಇಳಿಕೆ ಕಂಡಿದೆ. ಒಂದು ರೀತಿ ಚಿನ್ನದ ಓಟಕ್ಕೆ ಬ್ರೇಕ್ ಬಿದ್ದಂತಾಗಿದೆ. ಕಳೆದ ಐದು ದಿನಗಳಲ್ಲಿ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 2,600 ರೂ. ಹೆಚ್ಚಾಗಿತ್ತು. ಆದರೆ, ಇತ್ತೀಚಿನ ಅಂತರರಾಷ್ಟ್ರೀಯ ಮಟ್ಟದಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಇಂದು ಚಿನ್ನದ ಬೆಲೆ ಕುಸಿತ ಕಂಡಿದೆ.
ಸೋಮವಾರ (ಫೆ.03) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 440 ರೂ. ಕಡಿಮೆಯಾಗಿದೆ. 22 ಕ್ಯಾರೆಟ್ ಚಿನ್ನದ 400 ರೂ.ಗೆ ಇಳಿಕೆಗೊಂಡಿದೆ. ಮತ್ತೊಂದೆಡೆ, ಬೆಳ್ಳಿಯ ಬೆಲೆ ಸ್ಥಿರವಾಗಿದೆ. ಇನ್ನು ಅಮೆರಿಕಾದ ನೂತನ ಅಧ್ಯಕ್ಷ ಟ್ರಂಪ್ ಸುಂಕ ಸಮರ ಆರಂಭಿಸುತ್ತಿದ್ದಂತೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 2,800 ಡಾಲರ್ಕ್ಕಿಂತ ಹೆಚ್ಚಾಗಿದೆ. ಪ್ರಸ್ತುತ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಔನ್ಸ್ (31.10 ಗ್ರಾಂ) ಚಿನ್ನದ ಬೆಲೆ 2,811 ಡಾಲರ್ ದಾಖಲೆಯ ಗರಿಷ್ಠ ಮಟ್ಟದಲ್ಲಿದೆ.
ಜಾಗತಿಕ ಆರ್ಥಿಕ ಬೆಳವಣಿಗೆ ಮತ್ತು ಹಣದುಬ್ಬರ ಒತ್ತಡದಿಂದಾಗಿ ಇಂದು ಚಿನ್ನದ ಬೆಲೆ ಕುಸಿತ ಕಂಡಿದೆ ಎಂದು ವರದಿ ಉಲ್ಲೇಖಿಸಿದೆ. ಇಂದು ಕರ್ನಾಟಕ, ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣ ಸೇರಿದಂತೆ ಹಲವಾರು ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಕುಸಿದಿದೆ. ರಾಜ್ಯದಲ್ಲಿ 10 ಗ್ರಾಂ 24 ಕ್ಯಾರೆಟ್ಗೆ 84,050 ರೂ.ಇದೆ. ಅಂದರೆ, ನಿನ್ನೆಗೆ ಹೋಲಿಸಿದರೆ 440 ರೂ. ಕುಸಿದಿದೆ. ಇನ್ನು ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣಂನಲ್ಲಿ 24 ಕ್ಯಾರೆಟ್‌ನ ಚಿನ್ನದ ಬೆಲೆ 84,050 ರೂ. ಇದೆ.