

ನವದೆಹಲಿ: ಆಭರಣ ತಯಾರಕರು ಮತ್ತು ದಾಸ್ತಾನುದಾರ ರಿಂದ ಸ್ಥಳೀಯ ಮಟ್ಟದಲ್ಲಿ ಬೇಡಿಕೆ ಹೆಚ್ಚಿದ ಪರಿಣಾಮ ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ಚಿನ್ನದ ಬೆಲೆ 200 ರೂ. ಏರಿಕೆಯಾಗಿದೆ.
ಶೇ. 99.9ರಷ್ಟು ಶುದ್ಧತೆಯ ಚಿನ್ನ 10 ಗ್ರಾಂಗೆ 98,650 ರೂ. ದರದಲ್ಲಿ ಮಾರಾಟವಾಗಿದೆ. ಶೇ. 99.5ರಷ್ಟು ಶುದ್ಧತೆಯ ಬಂಗಾರ 10 ಗ್ರಾಂಗೆ 98,200 ರೂ. ಆಗಿದೆ. ಬೆಳ್ಳಿ ಬೆಲೆ ಗುರುವಾರ ಒಂದೇ ದಿನ 2,040 ರೂ. ಏರಿದ್ದು, ಕೆಜಿಗೆ 1,01,200 ರೂ. ಆಗಿದೆ ಎಂದು ಅಖಿಲ ಭಾರತ ಸರಾಫ ಸಂಘ ತಿಳಿಸಿದೆ.
ಜಾಗತಿಕ ಮಟ್ಟದ ಮಾರುಕಟ್ಟೆಯಲ್ಲಿನ ದೃಢ ಪ್ರವೃತ್ತಿ ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ ಈ ಏರಿಕೆಗೆ ಕಾರಣ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.