

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,550 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,630ರೂ.
ಬೆಳ್ಳಿ ಬೆಲೆ 1 ಕೆಜಿ: 72,750 ರೂ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 56,000 ರೂಪಾಯಿ ಇತ್ತು. ಆದರೆ ಇಂದು 55,550 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 450 ರೂಪಾಯಿ ಇಳಿಕೆಯಾಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 61.090 ರೂಪಾಯಿ ಇತ್ತು. ಆದರೆ ಇಂದು 60,630ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ 460 ರೂಪಾಯಿ ಇಳಿಕೆಯಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಬೆಂಗಳೂರು:55,550 ರೂ.
ಮುಂಬೈ: 55,550 ರೂ.
ದೆಹಲಿ: 55,700 ರೂ.
ಕೇರಳ: 55,550 ರೂ.
ಅಹ್ಮದಾಬಾದ್: 55,600 ರೂ
ಜೈಪುರ್: 55,700 ರೂ
ಹಬ್ಬದ ದಿನಗಳು ಹತ್ತಿರ ಬಂದಾಗ ಚಿನ್ನ, ಬೆಳ್ಳಿ ಖರೀದಿ ಮಾಡುವುದು ಭಾರತೀಯ ಸಂಸ್ಕೃತಿಯ ಭಾಗವಾಗಿರುವುದು ಸುಳ್ಳಲ್ಲ. ಹಬ್ಬದ ದಿನಗಳಲ್ಲಿ ಚಿನ್ನಾಭರಣ ಖರೀದಿ ಮಾಡುವುದರಿಂದ ಶುಭವಾಗುತ್ತದೆ ಎಂಬುದು ನಂಬಿಕೆ. ಅಲ್ಲದೇ ಹೀಗೆ ಮಾಡುವುದರಿಂದ ಸಂಪತ್ತು ವೃದ್ಧಿಯಾಗುತ್ತದೆ ಎಂದೂ ನಂಬಲಾಗುತ್ತದೆ. ಈ ವರ್ಷ ದೀಪಾವಳಿ ಸಂಭ್ರಮ ಹೆಚ್ಚಲು ಚಿನ್ನದ ಬೆಲೆಯೂ ಕಾರಣವಾಗಬಹುದು. ಯಾಕೆಂದರೆ ಕಳೆದ ಕೆಲವು ದಿನಗಳಿಂದ ಚಿನ್ನದ ದರ ಕುಸಿತವಾಗುತ್ತಲೇ ಇದೆ. ಬೆಳ್ಳಿ ಕೂಡ ಇಳಿಕೆಯ ಹಾದಿಯಲ್ಲಿ ಸಾಗುತ್ತಿದೆ