Gold, Silver Price; ಆಭರಣ ಖರೀದಿಸುವ ಯೋಚನೆ ಇದ್ದರೆ ಈಗ ಎಷ್ಟಿದೆ ನೋಡಿ ಚಿನ್ನ-ಬೆಳ್ಳಿ ದರ

gold
Published on

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಳ್ಳಿ ಬೆಲೆ 1 ಕೆಜಿ: 72,750 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,640ರೂ.

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,500 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 56,600 ರೂಪಾಯಿ ಇತ್ತು. ಆದರೆ ಇಂದು 56,500 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 100 ರೂಪಾಯಿ ಇಳಿಕೆಯಾಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 61.750 ರೂಪಾಯಿ ಇತ್ತು. ಆದರೆ ಇಂದು 61.640ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 110 ರೂಪಾಯಿ ಇಳಿಕೆಯಾಗಿದೆ.

ಜೈಪುರ್: 56,650 ರೂ

ಅಹ್ಮದಾಬಾದ್: 56,550 ರೂ

ಕೇರಳ: 56,500 ರೂ.

ದೆಹಲಿ: 56,650 ರೂ.

ಮುಂಬೈ: 56,500 ರೂ.

ಬೆಂಗಳೂರು: 56,500 ರೂ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಒಂದೆಡೆ ಚಿನ್ನದ ಮೇಲಿನ ಹೂಡಿಕೆ ಕಡಿಮೆಯಾಗುತ್ತಿದೆ. ಇನ್ನೊಂದೆಡೆ ಭಾರತದಂತಹ ದೇಶಗಳಲ್ಲಿ ಆಭರಣಗಳ ಬೇಡಿಕೆ ಹೆಚ್ಚಾಗಿದೆ. ಇಂತಹ ಸಮಯದಲ್ಲಿ ಚಿನ್ನದ ದರ ತೂಗುಯ್ಯಾಲೆಯಲ್ಲಿ ಮುಂದುವರೆದಿದ್ದು, ನಿನ್ನೆಗೆ ಹೋಲಿಸಿದರೆ ಚಿನ್ನದ ದರ ತುಸು ಇಳಿಕೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net