

ಬೆಂಗಳೂರು: ಇಂದಿನ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಚಿನ್ನದ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಬಂದಿದೆ. ಚಿನ್ನಾಭರಣ ಪ್ರಿಯರು ಹಾಗೂ ಚಿನ್ನಾಭರಣದ ಮೇಲೆ ಹೂಡಿಕೆ ಮಾಡುವವರು ಪ್ರತಿನಿತ್ಯದ ಚಿನ್ನದ ಬೆಲೆಯ ವಿವರಗಳಿಗಾಗಿ ಈ ಸುದ್ದಿ ಓದಿ..
ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 54,000 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58.910 ರೂ.
ಬೆಳ್ಳಿ ಬೆಲೆ 1 ಕೆಜಿ: 71,000 ರೂ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 53, 650 ರೂಪಾಯಿ ಇತ್ತು. ಆದರೆ ಇಂದು 54.000 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 350 ರೂಪಾಯಿ ಏರಿಕೆಯಾಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 58.530 ರೂಪಾಯಿ ಇತ್ತು. ಆದರೆ ಇಂದು 58.910 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 380 ರೂಪಾಯಿ ಏರಿಕೆಯಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ): ಬೆಂಗಳೂರು: 54,000 ರೂ. ಮುಂಬೈ: 54,000 ರೂ. ದೆಹಲಿ: 54,150 ರೂ. ಕೇರಳ: 54,000 ರೂ.
ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಏರಿಕೆ ಆಗುತ್ತಲೇ ಇದೆ. ಡಾಲರ್ ಸೂಚ್ಯಂಕದಲ್ಲಿ ಕುಸಿತ ಕಂಡಿರುವುದು ಚಿನ್ನದ ಬೆಲೆ ಏರಿಕೆಗೆ ಕಾರಣವಾಗಿದೆ. ಚಿನ್ನದ ಮೇಲಿನ ಹೂಡಿಕೆ ಆಕರ್ಷಣೆಯೂ ಹೆಚ್ಚಾಗುತ್ತಿದೆ. ಚಿನ್ನಾಭರಣ ಪ್ರಿಯರಿಗೆ ಹಾಗೂ ಹೂಡಿಕೆದಾರರಿಗೆ ಚಿನ್ನ ಹಾಗೂ ಬೆಳ್ಳಿ ದರದ ಪ್ರತಿನಿತ್ಯದ ಮಾಹಿತಿಗಾಗಿ ವಿಜಯವಾಣಿಯಲ್ಲಿ ಪ್ರಕಟಿಸಲಾಗುತ್ತಿದೆ.