Gold Silver Price; ಹೇಗಿದೆ ಇಂದು ನಿಮ್ಮ ನಗರದಲ್ಲಿ ಬೆಳ್ಳಿ, ಬಂಗಾರದ ದರ

gold
Published on

ಬೆಂಗಳೂರು: ಚಿನ್ನದ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಬಂದಿದೆ. ಚಿನ್ನಾಭರಣ ಪ್ರಿಯರು ಹಾಗೂ ಚಿನ್ನಾಭರಣದ ಮೇಲೆ ಹೂಡಿಕೆ ಮಾಡುವವರು ಪ್ರತಿನಿತ್ಯದ ಚಿನ್ನದ ಬೆಲೆಯ ವಿವರಗಳಿಗಾಗಿ ಈ ಸುದ್ದಿ ಓದಿ..

ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,600 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61.750ರೂ.

ಬೆಳ್ಳಿ ಬೆಲೆ 1 ಕೆಜಿ: 73,500 ರೂ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ,

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 56,400 ರೂಪಾಯಿ ಇತ್ತು. ಆದರೆ ಇಂದು 56,600 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 200 ರೂಪಾಯಿ ಏರಿಕೆಯಾಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 61.530 ರೂಪಾಯಿ ಇತ್ತು. ಆದರೆ ಇಂದು 61.750ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 200 ರೂಪಾಯಿ ಏರಿಕೆಯಾಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಬೆಂಗಳೂರು: 56,600 ರೂ.

ಮುಂಬೈ: 56,600 ರೂ.

ದೆಹಲಿ: 56,750 ರೂ.

ಕೇರಳ: 56,600 ರೂ.

ಅಹ್ಮದಾಬಾದ್: 56,650 ರೂ

ಜೈಪುರ್: 56,750 ರೂ

ಒಂದೆಡೆ ಆಭರಣಗಳ ಬೇಡಿಕೆ ಹೆಚ್ಚಾಗಿದೆ. ಇಂತಹ ಸಮಯದಲ್ಲಿ ಚಿನ್ನದ ದರ ತೂಗುಯ್ಯಾಲೆಯಲ್ಲಿ ಮುಂದುವರೆದಿದ್ದು, ನಿನ್ನೆಗೆ ಹೋಲಿಸಿದರೆ ಚಿನ್ನದ ದರ ತುಸು ಇಳಿಕೆಯಾಗಿದೆ. ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net