ಕುಸಿಯುತ್ತಿದ್ದ ಚಿನ್ನ ಮತ್ತೇ ಏರಿಕೆ! ಶೀಘ್ರವೇ 1.50 ಲಕ್ಷ ರೂ. ದಾಟಲಿದೆ ಗೋಲ್ಡ್​ ಬೆಲೆ; ಹೀಗಿದೆ ಇಂದಿನ ದರ | Gold Rates

gold
Published on

Gold Rate: ರಾಕೆಟ್​ ವೇಗದಲ್ಲಿ ಸಾಗುತ್ತಿರುವ ಚಿನ್ನದ ಬೆಲೆಗಳು ಇದೀಗ 1 ಲಕ್ಷ ರೂ. ಗಡಿದಾಟಿ ಮುನ್ನುಗ್ಗುತ್ತಿರುವುದು ಸದ್ಯ 'ಚಿನ್ನ'ದಂತ ಗ್ರಾಹಕರನ್ನು ತೀವ್ರ ಚಿಂತೆಗೆ ದೂಡಿದೆ. ಪ್ರಸ್ತುತ, ಮದುವೆ ಮತ್ತು ಸರಣಿ ಶುಭ ಸಮಾರಂಭಗಳ ಸೀಸನ್. ಇಂಥಾ​ ಸಮಯದಲ್ಲೇ ಗೋಲ್ಡ್ ಬೆಲೆಗಳು ಆಕಾಶಕ್ಕೆ ಮುತ್ತಿಡುತ್ತಿರುವುದು ಕೊಳ್ಳುವವರನ್ನು ಖರೀದಿಯಿಂದ ಇನ್ನಷ್ಟು ದೂರ ಸರಿಯುವಂತೆ ಮಾಡಿದೆ. ಇದರ ಪರಿಣಾಮವಾಗಿ, ದೇಶದಲ್ಲಿ ಚಿನ್ನದ ಬೆಲೆ ಇದೀಗ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ.

ಕಳೆದ ಕೆಲವು ದಿನಗಳಿಂದ ಇಳಿಕೆಯತ್ತ ಸಾಗುತ್ತಿದ್ದ ಚಿನ್ನದ ಬೆಲೆ ಇಂದು ದಿಢೀರ್​ ಹೆಚ್ಚಳ ಕಂಡಿದೆ. ಮಂಗಳವಾರ (ಸೆ.23) ಬೆಳಗ್ಗಿನ ವಿವರಗಳ ಪ್ರಕಾರ, 10 ಗ್ರಾಂ 24 ಕ್ಯಾರೆಟ್​ ಗೋಲ್ಡ್ ಬೆಲೆ 1,260 ರೂ. ಹೆಚ್ಚಾಗಿದೆ. 99.9 ಪ್ರತಿಶತ ಶುದ್ಧತೆ ಹೊಂದಿರುವ 10 ಗ್ರಾಂ ಚಿನ್ನದ ಬೆಲೆ ಇದೀಗ 1,14,000 ರೂ. ದಾಟಿದೆ. ಹಾಗಿದ್ದರೆ, ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಎಷ್ಟಿದೆ? ಎಂಬುದರ ವಿವರ ಹೀಗಿದೆ ಗಮನಿಸಿ.

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ

  • ನವದೆಹಲಿಯಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,04,950 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 1,14,480 ರೂ. ಆಗಿದೆ.
  • ಮುಂಬೈ, ಬೆಂಗಳೂರು, ಚೆನ್ನೈ ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,04,800 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 1,14,330 ರೂ. ಆಗಿದೆ.
  • ಇನ್ನು ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣದಲ್ಲಿ, 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 1,04,800 ರೂ. ಇದ್ದರೆ, 24 ಕ್ಯಾರೆಟ್ ಬೆಲೆ 1,14,330 ರೂ. ಆಗಿದೆ.

ಬೆಳ್ಳಿ ಬೆಲೆ 1,900 ರೂ. ಹೆಚ್ಚಳ

  • ದೆಹಲಿ, ಮುಂಬೈ ಮತ್ತು ಬೆಂಗಳೂರು ನಗರಗಳಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 1,40,500 ರೂ. ಆಗಿದೆ.
  • ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 1,49,000 ರೂ. ಆಗಿದೆ.
  • ಹೈದರಾಬಾದ್, ವಿಜಯವಾಡ ಮತ್ತು ವಿಶಾಖಪಟ್ಟಣದಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 1,49,000 ರೂ. ಇದೆ,(ಏಜೆನ್ಸೀಸ್).

ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ. ದಯವಿಟ್ಟು ಗಮನಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net