

ಬೆಂಗಳೂರು: ಗಣೇಶ ಹಬ್ಬ ಮುಗಿಯುತ್ತಿದ್ದಂತೆ ಬೆಲೆಯೇರಿಕೆ ಬಿಸಿ ಅನುಭವಿಸಬೇಕಿದೆ. ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಏರಿಕೆ ಕಂಡುಬಂದಿದೆ. ಕಳೆದ ವಾರಕ್ಕೆ ಹೋಲಿಸಿದರೆ ಹಬ್ಬದ ವಾರದಲ್ಲಿ ಎರಡರ ಬೆಲೆಯೂ ಏರಿಕೆ ಕಂಡಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 54,950 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59.950 ರೂ.
ಬೆಳ್ಳಿ ಬೆಲೆ 1 ಕೆಜಿ: 74,250 ರೂ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,850 ರೂಪಾಯಿ ಇತ್ತು. ಆದರೆ ಇಂದು 54,950 ರೂಪಾಯಿ ಆಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59.840 ರೂಪಾಯಿ ಇತ್ತು. ಆದರೆ ಇಂದು 59.950 ರೂಪಾಯಿ ಆಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಬೆಂಗಳೂರು: 54,950 ರೂ.
ಮುಂಬೈ: 54,950 ರೂ.
ದೆಹಲಿ: 55,100 ರೂ.
ಕೇರಳ: 54,950 ರೂ.
ಜಾಗತಿಕ ಮಟ್ಟದ ಆರ್ಥಿಕತೆ, ಹಣದುಬ್ಬರದ ಅನಿಶ್ಚಿತತೆ, ನಿರುದ್ಯೋಗ, ಬಡ್ಡಿ ದರ ಏರಿಕೆ, ಡಾಲರ್ ಎದುರು ರುಪಾಯಿ ಕುಸಿತ ಮತ್ತು ಬ್ಯಾಂಕಿಂಗ್ ಬಿಕ್ಕಟ್ಟು ಎಲ್ಲವೂ ಪ್ರಭಾವ ಬೀರುತ್ತಿದೆ. ಗಣೇಶ ಹಬ್ಬದ ಬಳಿಕ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, ಈ ವಾರ ಚಿನ್ನ ದಿನೇ ದಿನೇ ದುಬಾರಿಯಾಗುತ್ತಿದೆ.