ಚಿನ್ನ ಖರೀದಿಸುವವರಿಗೆ ಶುಭ ಸುದ್ದಿ..ಮತ್ತಷ್ಟು ಇಳಿಕೆಯಾಯ್ತು ಚಿನ್ನ, ಬೆಳ್ಳಿ ದರ

gold and money
ಸಾಂದರ್ಭಿಕ ಚಿತ್ರ
Published on

ಬೆಂಗಳೂರು: ಚಿನ್ನ, ಬೆಳ್ಳಿ ಬೆಲೆ ಆಗಾಗ್ಗೆ ಏರಿಕೆ – ಇಳಿಕೆಯಾಗುತ್ತಿರುತ್ತದೆ. ಷೇರು ಮಾರುಕಟ್ಟೆಯಲ್ಲಿ ಏರಿಕೆ – ಇಳಿಕೆಯ ಆಧಾರದ ಮೇಲೂ ಆಭರಣ ದರದಲ್ಲಿ ವ್ಯತ್ಯಾಸವಾಗುತ್ತಿರುತ್ತದೆ. ದಿನಂಪ್ರತಿ ಚಿನ್ನ ಹಾಗೂ ಬೆಳ್ಳಿಯ ಬೆಲೆಗಳು ಬದಲಾಗುತ್ತಲೇ ಇದ್ದು ಇದೊಂದು ದಿನನಿತ್ಯ ನಡೆಯುವ ವಿದ್ಯಮಾನವಾಗಿ ಬಿಟ್ಟಿದೆ. ಹಾಗಾದರೆ ನಾವಿಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಎಷ್ಟು? ಎಷ್ಟೆಲ್ಲಾ ಏರಿಕೆ ಕಂಡಿದೆ ಎಂಬುದರ ಫುಲ್‌ ಡಿಟೇಲ್ಸ್‌ ತಿಳಿಯೋಣ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54.450 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59.400 ರೂ.

ಬೆಳ್ಳಿ ಬೆಲೆ 1 ಕೆಜಿ: 71,500 ರೂ.

ನಿನ್ನೆ ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 54.650 ರೂಪಾಯಿ ಇತ್ತು. ಆದರೆ ಇಂದು 54.450 ರೂಪಾಯಿ ಆಗಿದೆ. 100 ರೂಪಾಯಿ ಇಳಿಕೆ ಕಂಡಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 59.620 ರೂಪಾಯಿ ಇತ್ತು. ಆದರೆ ಇಂದು 59.400 ರೂಪಾಯಿ ಆಗಿದೆ. 110 ರೂಪಾಯಿ ಇಳಿಕೆಯಾಗಿದೆ. ಕಳೆದು ಎರಡು ದಿನಗಳಿಂದ ಯತಾಸ್ಥಿತಿಯನ್ನು ಕಾದು ಕೊಂಡಿದ್ದ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಬೆಂಗಳೂರು: 54.450 ರೂ.

ಮುಂಬೈ: 54.450 ರೂ.

ದೆಹಲಿ: 54,600 ರೂ.

ಕೇರಳ: 54.450 ರೂ.

ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಚಿನ್ನದ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ದಿನದಿಂದದಿನಕ್ಕೆ ಬೆಲೆ ಹೆಚ್ಚಾಗುತ್ತಲೇ ಹೋಗುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net