ಶ್ರಾವಣದಲ್ಲಿ ಚಿನ್ನ ದುಬಾರಿ! ಬೆಳ್ಳಿ 1000 ರೂ. ಹೆಚ್ಚಳ; ಕಳೆದ 5 ದಿನಗಳಲ್ಲಿ ಎಷ್ಟು ಏರಿಕೆ? | Gold Price

gold rates
Published on

Gold Price: ಆಷಾಢ ಮಾಸದಲ್ಲಿ ಸ್ವಲ್ಪ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇದೀಗ ಶ್ರಾವಣ ಮಾಸದಲ್ಲಿ ದಿಢೀರ್​ ಏರಿಕೆಯಾಗಿದೆ. ಕಳೆದ ಐದು ದಿನಗಳಲ್ಲಿ ಚಿನ್ನದ ಬೆಲೆ ಗಗನದತ್ತ ಮುಖಮಾಡಿದ್ದು, ಗಣನೀಯವಾಗಿ ಹೆಚ್ಚುತ್ತಲೇ ಇದೆ. ಇದಕ್ಕೆ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿನ ಬೆಳವಣಿಗೆ ಮತ್ತು ಟ್ರಂಪ್ ಸುಂಕ ಸಮರವೇ ಬಲವಾದ ಕಾರಣ. ಆಗಸ್ಟ್ 2ರಿಂದ ಇವತ್ತಿನವರೆಗೆ ಚಿನ್ನದ ಬೆಲೆಯಲ್ಲಿ 2,500 ರೂ. ಹೆಚ್ಚಾಗಿದೆ.

ಬುಧವಾರ (ಆ.06) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 110 ರೂ. ಏರಿಕೆಯಾದರೆ, 22 ಕ್ಯಾರೆಟ್ ಚಿನ್ನ 100 ರೂ. ಏರಿಕೆಗೊಂಡಿದೆ. ಆದರೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಕಡಿಮೆಯಾಗಿದೆ. ಒಂದು ಔನ್ಸ್ ಚಿನ್ನದ ಬೆಲೆ ಒಂಬತ್ತು ಡಾಲರ್ ಕಡಿಮೆಯಾಗಿದೆ. ಪ್ರಸ್ತುತ, ಒಂದು ಔನ್ಸ್ ಚಿನ್ನ 3,371 ಡಾಲರ್‌ಗಳಲ್ಲಿ ವಹಿವಾಟು ನಡೆಸುತ್ತಿದೆ. ಮತ್ತೊಂದೆಡೆ, ಬೆಳ್ಳಿ ದರವೂ ಹೆಚ್ಚಾಗಿದೆ. ಒಂದು ಔನ್ಸ್ ಬೆಳ್ಳಿ 1,000 ರೂ. ಹೆಚ್ಚಳ ಕಂಡಿದೆ.

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ದರ

  • ನವದೆಹಲಿಯಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 93,950 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 1,02,480. ರೂ. ಆಗಿದೆ.
  • ಮುಂಬೈ, ಬೆಂಗಳೂರು, ಚೆನ್ನೈ ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 93,800 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 1,02,330 ರೂ. ಆಗಿದೆ.
  • ಇನ್ನು ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣದಲ್ಲಿ, 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 93,800 ರೂ. ಇದ್ದರೆ, 24 ಕ್ಯಾರೆಟ್ ಬೆಲೆ 1,02,330 ರೂ. ಆಗಿದೆ.

ಬೆಳ್ಳಿ ಬೆಲೆ 1,000 ರೂ. ಹೆಚ್ಚಳ

  • ದೆಹಲಿ, ಮುಂಬೈ ಮತ್ತು ಬೆಂಗಳೂರು ನಗರಗಳಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 1,16,000 ರೂ. ಆಗಿದೆ.
  • ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 1,26,000 ರೂ. ಆಗಿದೆ.
  • ಹೈದರಾಬಾದ್, ವಿಜಯವಾಡ ಮತ್ತು ವಿಶಾಖಪಟ್ಟಣದಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 1,26,000 ರೂ. ಇದೆ,(ಏಜೆನ್ಸೀಸ್).

ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ. ದಯವಿಟ್ಟು ಗಮನಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net