ಚಿನ್ನ, ಬೆಳ್ಳಿ ಖರೀದಿಸುವ ಆಸೆ ಇದ್ರೆ ಬಿಟ್ಟು ಬಿಡಿ!; 70 ಸಾವಿರ ರೂ. ಗಡಿ ದಾಟಿದ ಬೆಲೆ

gold11
Published on

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಎರಡೂ ಕೂಡ ಹೊಸ ದಾಖಲೆ ಬೆಲೆ ಪಡೆದಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಇವೆರಡೂ ಲೋಹಗಳಿಗೆ ಭಾರೀ ಬೇಡಿಕೆ ಮುಂದುವರಿದಿದೆ. ಮದುವೆ ಸಮಾರಂಭಗಳ ಸೀಸನ್ ಇದು. ಶುಭ ಸಮಾರಂಭಗಳಿಗೆ ಚಿನ್ನಾಭರಣವೂ ಅತೀ ಮುಖ್ಯ. ಹಾಗಾಗಿ ಚಿನ್ನ ಕೊಳ್ಳುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಈ ಸಮಯದಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆ ಹಿಂದಿಗಿಂತ ದುಬಾರಿಯೇ ಇದೆ.

ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ,ಏರಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,600 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,470ರೂ.

ಬೆಳ್ಳಿ ಬೆಲೆ 1 ಕೆಜಿ: 79,750 ರೂ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 64,100 ರೂಪಾಯಿ ಇತ್ತು. ಆದರೆ ಇಂದು  64,600 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆಗಿಂತ 500 ರೂ. ಏರಿಕೆಯಾಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 69,870 ರೂಪಾಯಿ ಇತ್ತು. ಆದರೆ ಇಂದು 70,470ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆಗಿಂತ 600 ರೂ. ಏರಿಕೆಯಾಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಬೆಂಗಳೂರು: 64,600ರೂ.

ಮುಂಬೈ: 64,600 ರೂ

ದೆಹಲಿ: 64,750  ರೂ.

ಕೇರಳ: 64,600ರೂ.

ಅಹ್ಮದಾಬಾದ್:64,650 ರೂ.

ಜೈಪುರ್: 64,750 ರೂ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net