ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​; ಸಬ್ ಇನ್​ಸ್ಪೆಕ್ಟರ್​ ನೇಮಕಕ್ಕೆ ಸ್ಪರ್ಧಾತ್ಮಕ ಪರೀಕ್ಷೆ

job
Published on

ಬೆಂಗಳೂರು: ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸಬ್‍ ಇನ್​ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಮುಕ್ತ ಹಾಗೂ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸುತ್ತಿದೆ.

ಪರೀಕ್ಷೆಯು ನವೆಂಬರ್ 2023ರಲ್ಲಿ ನಡೆಯಲಿದ್ದು, ಪರೀಕ್ಷೆಯ ನಿಗಧಿತ ದಿನಾಂಕವನ್ನು SSC ವೆಬ್‍ಸೈಟ್ www.ssckkkr.kar.nic.in ಮತ್ತು https://ssc.nic.in ನಲ್ಲಿ ಲಭ್ಯವಿದೆ.

ಅರ್ಜಿ ಸಲ್ಲಿಸುವವರ ವಿದ್ಯಾರ್ಹತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿಯನ್ನುhttps://ssc.nic.in ಲಿಂಕ್‍ನಲ್ಲಿ ಆಗಸ್ಟ್ 15 ರೊಳಗೆ ಸಲ್ಲಿಸಬೇಕು. ಮಾಹಿತಿಗಾಗಿ 080-25502520 ನ್ನು ಸೋಮವಾರದಿಂದ ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಂಪರ್ಕಿಸಬಹುದು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಎಸ್‍ಎಸ್‍ಸಿ ಮುಖ್ಯ ಕಚೇರಿ ನವದೆಹಲಿಯ ವೆಬ್‍ಸೈಟ್ https://ssc.nic.in ಮತ್ತು ಎಸ್‍ಎಸ್‍ಸಿ ಕರ್ನಾಟಕ-ಕೇರಳ ಪ್ರದೇಶದ ವೆಬ್‍ಸೈಟ್ www.ssckkr.kar.nic.in ನ್ನು ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net