ಪಾಲಿಟೆಕ್ನಿಕ್ ಅನುತ್ತೀರ್ಣದವರಿಗೆ ಗುಡ್ ನ್ಯೂಸ್; ಡಿಸೆಂಬರ್‌ನಲ್ಲಿ ಪರೀಕ್ಷೆ

Exam (3)
Published on

ಬೆಂಗಳೂರು ರಾಜ್ಯದ ಪಾಲಿಟೆಕ್ನಿಕ್‌ಗಳಲ್ಲಿ ಈ ಹಿಂದೆ ವ್ಯಾಸಂಗ ಮಾಡಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಇದೇ ಡಿಸೆಂಬರ್‌ನಲ್ಲಿ ಪರೀಕ್ಷೆ ಬರೆಯಲು ಉನ್ನತ ಶಿಕ್ಷಣ ಇಲಾಖೆಯು ಅವಕಾಶ ಕಲ್ಪಿಸಿದೆ.

ಈ ಪಠ್ಯಕ್ರಮ ಜಾರಿಯಲ್ಲಿದ್ದ ಅವಧಿಯಲ್ಲಿ ಪಾಲಿಟೆಕ್ನಿಕ್‌ಗೆ ಐಟಿಐ, ಪಿಯುಸಿ ಮುಗಿಸಿ ಪ್ರವೇಶ ಪಡೆದಿದ್ದ ವಿದ್ಯಾರ್ಥಿಗಳಿಗೆ 2023ರ ಡಿಸೆಂಬರ್ ನಲ್ಲಿ ಪರೀಕ್ಷೆ ಬರೆಯಲು ನಿಯಮ ಪ್ರಕಾರ ಅವಕಾಶ ಇರಲಿಲ್ಲ. ಆದರೆ ವಿದ್ಯಾರ್ಥಿಗಳ ಹಿತದ ದೃಷ್ಟಿಯಿಂದ 2023ರ ಡಿಸೆಂಬರ್‌ನಲ್ಲಿ ಕೊನೆಯ ಅವಕಾಶವನ್ನು ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆ ತಿಳಿಸಿದೆ.

ಪಾಲಿಟೆಕ್ನಿಕ್‌ನಲ್ಲಿ 2003, 2009 ಮತ್ತು 2015ರ ಪಠ್ಯಕ್ರಮದ ವಿದ್ಯಾರ್ಥಿಗಳು ಪಾಲಿಟೆಕ್ನಿಕ್ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿರುವವರು ಈ ಅವಕಾಶವನ್ನು ಬಳಸಿಕೊಳ್ಳಬಹುದು.ಇಲಾಖೆಯ ಈ ತೀರ್ಮಾನದಿಂದ 2 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಹೇಳಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net