ರಾಜ್ಯದಲ್ಲಿ ಇನ್ನೂ 5 ದಿನ ಉತ್ತಮ ಮಳೆ; ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್!

heavy rain
Published on

ಬೆಂಗಳೂರು: ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ಲಭಿಸಿದೆ.

ಎಲ್ಲೆಲ್ಲಿ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್?

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರಿ ‌ಮಳೆಯಾಗುವ ಸಾಧ್ಯತೆ ಇದ್ದು 115 ಮಿ.ಮೀ ನಿಂದ 204 ನಿ.ಮೀ ತನಕ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅದಲ್ಲದೇ ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ಲಭಿಸಿದ್ದು ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಮಳೆ ಕೊರತೆ ಕಡಿಮೆಯಾಗುತ್ತಿದೆ

ಜುಲೈ‌ 4 ರಿಂದ ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಮತ್ತಷ್ಟು ಮಳೆ ಸಾಧ್ಯತೆಯಿದ್ದು ಮಳೆ ಕೊರತೆ 51% ಇಳಿಕೆಯಾಗಿದೆ ಎನ್ನಲಾಗಿದೆ. ರಾಜ್ಯದಲ್ಲಿ ಕಳೆದ 10 ದಿನಗಳಿಂದ ಉತ್ತಮ ಮಳೆಯಾಗಿದ್ದು, ಮಳೆ ಕೊರತೆ ಕಡಿಮೆಯಾಗಿದೆ ಎನ್ನಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net