ಸಿಇಟಿ ಆಂಗ್ಲ ಮಾಧ್ಯಮ ಶಾಲೆಗೆ ಉತ್ತಮ ಫಲಿತಾಂಶ

Published on

ಸಾಲಿಗ್ರಾಮ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲೂಕಿನ ಮಿರ್ಲೆ ಚಾಮುಂಡೇಶ್ವರಿ ಎಜುಕೇಷನ್ ಟ್ರಸ್ಟ್ (ಸಿಇಟಿ) ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಸ್.ಸುರಭಿ 578 ಅಂಕ, ಶಶಾಂಕ್ 578 ಅಂಕ, ವಿ.ಎಂ.ದಿವ್ಯಾ 576 ಅಂಕ, ಗಾನವಿ 554 ಅಂಕ, ಸಾಯಿಸ್ತ ಸಿದ್ದಿಕ್ 541 ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ ಹೊಂದಿದ್ದಾರೆ.

10 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು, ಉಳಿದ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಶಾಲೆಗೆ ಒಟ್ಟು ಶೇ.88 ಫಲಿತಾಂಶ ದೊರಕಿದೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ಧರಣಿಕುಮಾರ್, ಸಂಸ್ಥೆಯ ಅಧ್ಯಕ್ಷೆ ಯಶೋದಾ ಜಯರಾಮ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net