

ವಿಜಯಪುರ: ಚಲಿಸುತ್ತಿದ್ದ ಗೂಡ್ಸ್ ರೈಲಿನ ಬೋಗಿಗಳ ನಡುವಿನ ಸಂಪರ್ಕ ಕಡಿತಗೊಂಡ ಪರಿಣಾಮ ಆರು ಬೋಗಿಗಳು ಉರುಳಿಬಿದ್ದ ಘಟನೆ ವಿಜಯಪುರ ಜಿಲ್ಲೆ ಕೊಲ್ಹಾರ ಪಟ್ಟಣದ ಮುಳವಾಡ ರೈಲು ನಿಲ್ದಾಣ ಬಳಿ ಸೋಮವಾರ ಮುಂಜಾನೆ ಸಂಭವಿಸಿದೆ.
ಸೊಲ್ಲಾಪುರದಿಂದ ವಿಜಯಪುರ ಮಾರ್ಗವಾಗಿ ಹುಬ್ಬಳ್ಳಿಗೆ ಹೊರಟಿದ್ದ ರೈಲಿನ ಟ್ರ್ಯಾಕ್ ಕಟ್ ಆಗಿದೆ. ಗೂಡ್ಸ್ ರೈಲಾಗಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ವಿಜಯಪುರ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಗೂಡ್ಸ್ ರೈಲು ಅಪಘಾತದ ಹಿನ್ನೆಲೆ ಸೊಲ್ಲಾಪುರ ಹಾಗೂ ವಿಜಯಪುರ ಮಾರ್ಗದಿಂದ ಹುಬ್ಬಳ್ಳಿ ಮಾರ್ಗಕ್ಕೆ ಹೋಗಬೇಕಿದ್ದ 6 ರೈಲುಗಳ ಸಂಚಾರ ಇಂದು ರದ್ದಾಗಿದೆ.