ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು!

train
Published on

ಒಡಿಶಾ: ಒಡಿಶಾದ ಬಾಲಸೋರ್​​​ನಲ್ಲಿ ನಡೆದ ರೈಲು ದುರಂತದ ಬೆನ್ನಲ್ಲೇ ಇದೀಗ ಮತ್ತೊಂದು ರೈಲು ಹಳಿ ತಪ್ಪಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಒಡಿಶಾದ ಬರ್ಗಢ ಜಿಲ್ಲೆಯಲ್ಲಿ ಸೋಮವಾರ ಖಾಸಗಿ ಸಿಮೆಂಟ್ ಕಾರ್ಖಾನೆಯೊಂದರ ಗೂಡ್ಸ್ ರೈಲು ಸುಣ್ಣದ ಕಲ್ಲು ಸಾಗಿಸುತ್ತಿದ್ದ ರೈಲಿನ ಕನಿಷ್ಠ ಐದು ಬೋಗಿಗಳು ಹಳಿತಪ್ಪಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಒಡಿಶಾದ ಬಾಲಸೋರ್‌ನಲ್ಲಿ ಮೂರು ರೈಲುಗಳು ಡಿಕ್ಕಿ ಹೊಡೆದ ಮೂರು ದಿನಗಳ ನಂತರ ಈ ರೈಲು  ಬರುತ್ತಿತ್ತು ಎನ್ನಲಾಗಿದೆ.

ಕಳೆದ ಎರಡು ದಿನಗಳ ಹಿಂದೆ ಒಡಿಶಾದಲ್ಲಿ ತ್ರಿವಳಿ ರೈಲುಗಳ ಅಪಘಾತ ಸಂಭವಿಸಿ 275 ಮಂದಿ ಮೃತಪಟ್ಟು, ಕೆಲವರು ಗಾಯಗೊಂಡಿದ್ದರು. ಈ ಘಟನೆ ಮಾಸುವ ಮುನ್ನವೇ ಗೂಡ್ಸ್​ ರೈಲೊಂದು ಹಳಿ ತಪ್ಪಿರುವ ಘಟನೆ ಬರ್ಘಾ ಜಿಲ್ಲೆಯಲ್ಲಿ ನಡೆದಿದೆ.

ಕೋರಮಂಡಲ್ ಎಕ್ಸ್ ಪ್ರೆಸ್ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಅದರ ಹಲವು ಬೋಗಿಗಳು ಚದುರಿ ಹೋಗಿದ್ದವು. ಇದೇ ವೇಳೆ ಪಕ್ಕದ ಹಳಿಯಲ್ಲಿ ಹಾದು ಹೋಗುತ್ತಿದ್ದ ಬೆಂಗಳೂರು-ಹೌರಾ ಸೂಪರ್‍ಫಾಸ್ಟ್ ರೈಲಿಗೂ ಬೋಗಿಗಳು ಡಿಕ್ಕಿ ಹೊಡೆದು, ಅದರ ಕೆಲವು ಬೋಗಿಗಳೂ ಹಳಿ ತಪ್ಪಿದ್ದವು. ಸುಮಾರು 260 ಗಾಯಾಳುಗಳು ಒಡಿಶಾದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಸುಮಾರು 900 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net