ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.10 ಶುಲ್ಕ ಹೆಚ್ಚಳಕ್ಕೆ ಸರ್ಕಾರ ಅನುಮತಿ: ಇಲ್ಲಿದೆ ಶುಲ್ಕದ ಮಾಹಿತಿ

Medical Education
Published on

ಬೆಂಗಳೂರು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ 2024-25ನೇ ಸಾಲಿನಲ್ಲಿ ವ್ಯಾಸಂಗ ಮಾಡಲಿರುವ ವಿದ್ಯಾರ್ಥಿಗಳಿಗೆ ಶೇ.10 ಶುಲ್ಕ ಹೆಚ್ಚಿಸಲು ರಾಜ್ಯ ಸರ್ಕಾರವು ಅನುಮತಿ ನೀಡಿದೆ.

ಶನಿವಾರ ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಗಳೊಂದಿಗೆ ನಡೆದ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, ಒಡಂಬಡಿಕೆಗೆ ಸಹಿ ಮಾಡಲಾಗಿದೆ. ಖಾಸಗಿ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಸೀಟು ಶುಲ್ಕ 1,40,621 ರೂ. ಮತ್ತು ಖಾಸಗಿ ಕಾಲೇಜುಗಳಲ್ಲಿ ಖಾಸಗಿ ಕೋಟಾ ಸೀಟಿಗೆ 11,68,167 ರೂ. ನಿಗದಿ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net