ಐಕ್ಯ ಮಂಟಪ ಅಭಿವೃದ್ಧಿಪಡಿಸಲು ಸಮಿತಿ ರಚಿಸಿ ಸರ್ಕಾರ ಆದೇಶ

DVG_Rudrappa-Lamani.jpg
Published on

ರಾಣೆಬೆನ್ನೂರ: ತಾಲೂಕಿನ ಚೌಡಯ್ಯನದಾಪುರ ಗ್ರಾಮದ ಶ್ರೀ ಅಂಬಿಗರ ಚೌಡಯ್ಯನವರ ಐಕ್ಯ ಮಂಟಪ ಅಭಿವೃದ್ಧಿ ಪಡಿಸುವ ಸಲುವಾಗಿ ಐದು ಜನರನ್ನೊಳಗೊಂಡ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಮಿತಿಗೆ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅಧ್ಯಕ್ಷರಾಗಿದ್ದು, ಶಾಸಕ ಪ್ರಕಾಶ ಕೋಳಿವಾಡ, ವಿಧಾನ ಪರಿಷತ್​ ಸದಸ್ಯ ತಿಪ್ಪಣ್ಣ ಕಮಕನೂರ, ಪ್ರವಾಸೋದ್ಯಮ ಇಲಾಖೆ ಆಯುಕ್ತರನ್ನು ಸದಸ್ಯರನ್ನಾಗಿ ಹಾಗೂ ಪ್ರಾಚ್ಯವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಆಯುಕ್ತರನ್ನು ಸದಸ್ಯ ಕಾರ್ಯದಶಿರ್ಯನ್ನಾಗಿ ಘೋಷಿಸಿದೆ.

ಸಮಿತಿಯವರು ಮುಂದಿನ ಎರಡು ತಿಂಗಳು ಒಳಗೆ ಅಂಬಿಗರ ಚೌಡಯ್ಯನವರ ಐಕ್ಯ ಮಂಟಪ ಅಭಿವೃದ್ಧಿ ಪಡಿಸುವ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಸರ್ಕಾರ ಸೂಚಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net