ಬಡವರು ಬಲಿಯಾದರೆ ಸರ್ಕಾರ ಡೋಂಟ್ ಕೇರ್|Government don't care

JDS LOGO
Published on

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸುವ ಡಿಸಿಎಂ ಸರ್ಕಾರಿ ಆಸ್ಪತ್ರೆಗಳಲ್ಲಿ ಮೃತರಾದ ಬಾಣಂತಿಯರ ಕುಟುಂಬಗಳಿಗೆ ಸಾಂತ್ವನ ಹೇಳಲೇ ಇಲ್ಲ(Government don't care if the poor are victims) ಎಂದು ಜೆಡಿಎಸ್ ಟಾಂಗ್ ಕೊಟ್ಟಿದೆ.

ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತವಾಗಿ ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್(DCM D.K.Shivakumar), ಸಚಿವ ಜಮೀರ್ ಅಹ್ಮದ್ ಖಾನ್(Zameer Ahamad Khan) ಸೇರಿದಂತೆ ಕಾಂಗ್ರೆಸ್ ನಾಯಕರುಗಳು ಓಡೋಡಿ ಹೋಗಿ ಸಚಿವೆಯ ಆರೋಗ್ಯ ವಿಚಾರಿಸಿ ಶೀಘ್ರ ಚೇತರಿಕೆಗೆ ಹಾರೈಸಿ ಬರುತ್ತಿದ್ದಾರೆ. ಇದು ತಪ್ಪಲ್ಲ. ಆದರೆ, ಬೆಳಗಾವಿ, ಬಳ್ಳಾರಿ, ರಾಯಚೂರು ಸೇರಿದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಮತ್ತು ನವಜಾತ ಶಿಶುಗಳ ಸರಣಿ ಸಾವುಗಳಾದಾಗ ಮಹಿಳಾ ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಾಗಲಿ, ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಆಗಲಿ ಅಥವಾ ಉಪಮುಖ್ಯಮಂತ್ರಿ ಡಿಕೆಶಿ ಆಗಲಿ ಒಮ್ಮೆಯೂ ಆಸ್ಪತ್ರೆಗೆ ಭೇಟಿ ನೀಡಿಲ್ಲ. ಮೃತರ ಕುಟುಂಬದವರಿಗೆ ಸಾಂತ್ವನವನ್ನು ಹೇಳಲೇ ಇಲ್ಲ ಎಂದು ಲೇವಡಿ ಮಾಡಿದೆ.

ಕಾಂಗ್ರೆಸ್ ಸರ್ಕಾರದಲ್ಲಿ ಜನಸಾಮಾನ್ಯರ ಜೀವಕ್ಕೆಬೆಲೆಯೇಇಲ್ಲ. ಸರ್ಕಾರದ ಬೇಜವಾಬ್ದಾರಿ, ನಿರ್ಲಕ್ಷ್ಯಕ್ಕೆ ಬಡವರು ಬಲಿಯಾದರೇ ಡೋಂಟ್ ಕೇರ್. ಕಾಂಗ್ರೆಸ್ ನಾಯಕರಿಗೆ ಆದರೇ ವಿಶೇಷ ಕಾಳಜಿ. ಕಾಂಗ್ರೆಸ್ ಸರ್ಕಾರದ ಈ ಇಬ್ಬಗೆ ನೀತಿಗೆ ಧಿಕ್ಕಾರ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net