ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಐಡಿ ಕಾರ್ಡ್ ಟ್ಯಾಗ್ ಧರಿಸಲು ಆದೇಶ !

id tag
Published on

ಬೆಂಗಳೂರು: ಎಲ್ಲಾ ಸರ್ಕಾರಿ ನೌಕರರು ಇನ್ನು ಮುಂದೆ ಕೆಂಪು-ಹಳದಿ ಬಣ್ಣದ ಐಡಿ ಕಾರ್ಡ್ ಟ್ಯಾಗ್ ಹಾಕುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

''ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ'' ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಟ್ಯಾಗ್ ಹಾಕಿಕೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ವಿಭಾಗದ ಅಧೀನ ಕಾರ್ಯದರ್ಶಿ ಸಂದೀಪ್‌ ಬಿ.ಕೆ ಆದೇಶಿಸಿದ್ದಾರೆ.

ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಹಿನ್ನಲೆಯಲ್ಲಿ ಸರ್ಕಾರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕರ್ನಾಟಕ ಅಭಿಯಾನ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಐಡಿ ಕಾರ್ಡ್ ಟ್ಯಾಗ್ ಅನ್ನು ಕೆಂಪು-ಹಳದಿ ಟ್ಯಾಗ್ ಬಳಸುವಂತೆ ಆದೇಶ ಹೊರಡಿಸಲಾಗಿದೆ.

ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ ಮಂಡಳಿ, ನಿರ್ದೇಶನಾಲಯ ಅರೆ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿಗಳು ತಮ್ಮ ಇಲಾಖೆ ಐಡಿ ಕಾರ್ಡ್‌ಗೆ ಹೊಂದುವಂತೆ ಸಿಬ್ಬಂದಿ ಹಳದಿ ಮತ್ತು ಕೆಂಪು ಬಣ್ಣದ ಗುರುತಿನ ಚೀಟಿ ಟ್ಯಾಗ್​ ನೀಡಲು ಸಂಬಂಧಿಸಿದ ಇಲಾಖೆಗಳು ಕ್ರಮವಹಿಸುವಂತೆ ಸೂಚಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net