

ಶೃಂಗೇರಿ: ವಿದ್ಯಾರ್ಥಿಗಳು ಭವಿಷ್ಯದ ಸವಾಲುಗಳನ್ನು ಧೈರ್ಯದಿಂದ ಎದುರಿಸುವ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು ಎಂದು ಮೆಣಸೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯೆ ಭಾರತಿ ತಿಳಿಸಿದರು.
ಮೆಣಸೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಅಂತಿಮ ವರ್ಷದ ವಿದ್ಯಾರ್ಥಿಗಳ ಸಮಾರೋಪ ಮತ್ತು ಪ್ರತಿಭಾನ್ವೇಷಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪಾಲಕರು ಹಾಗೂ ಶಿಕ್ಷಕರು ಮಕ್ಕಳಿಗೆ ಶಿಕ್ಷಣದ ಜತೆಗೆ ಬೌದ್ಧಿಕ ಮೌಲ್ಯಗಳ ಅರಿವು ಮೂಡಿಸಬೇಕು. ವಿದ್ಯಾರ್ಥಿಗಳು ಪ್ರತಿ ಹಂತದಲ್ಲಿ ಅಧ್ಯಾಪಕರ ಮಾರ್ಗದರ್ಶನ ಪಡೆದು ಭವಿಷ್ಯ ರೂಪಿಸುವತ್ತ ಹೆಚ್ಚಿನ ಗಮನ ನೀಡಬೇಕು ಎಂದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಅರುಣ್‌ಕುಮಾರ್ ಮಾತನಾಡಿದರು. ಸಾಂಸ್ಕೃತಿಕ ವೇದಿಕೆ ಮುಖ್ಯಸ್ಥೆ ಆಶಾ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆ ಹೊರತರಲು ಸರ್ಕಾರ ಹಲವು ಯೋಜನೆಗಳನ್ನು ಕಾಲೇಜುಗಳಲ್ಲಿ ಜಾರಿಗೆ ತರುತ್ತ್ತಿದೆ. ಪ್ರತಿ ವಿದ್ಯಾರ್ಥಿ ಅದರ ಸದುಪಯೋಗ ಪಡೆದು ಜೀವನದಲ್ಲಿ ಯಶಸ್ಸು ಕಾಣಬೇಕು ಎಂದರು.
ಕಾಲೇಜಿನ ನಿವೃತ್ತ ಸಿಬ್ಬಂದಿ ಮಂಜೇಗೌಡ ಅವರನ್ನು ಗೌರವಿಸಲಾಯಿತು. ಅಂತಿಮ ವರ್ಷದ ವಿದ್ಯಾರ್ಥಿಗಳು ಗುರುವಂದನೆ ಸಲ್ಲಿಸಿದರು. ಕಾಲೇಜು ಅಭಿವೃದ್ಧಿ ಮಂಡಳಿ ಅಧ್ಯಕ್ಷ ತ್ರಿಮೂರ್ತಿ, ಸದಸ್ಯ ಪ್ರದೀಪ್ ಯಡದಾಳು, ಐಕ್ಯೂಎಸಿ ಸಂಚಾಲಕಿ ಬಿ.ಜಿ.ಆಶಾ, ಬಿ.ಟಿ.ರಾಘವೇಂದ್ರ ರೆಡ್ಡಿ, ಮರಿಸ್ವಾಮಿ, ರಾಘವೇಂದ್ರ ಪ್ರಸಾದ್, ಮೇಘನಂದ, ಅಬೂಬಕರ್ ಇದ್ದರು.