ಕನಕ ಭವನಕ್ಕೆ ಸರ್ಕಾರದಿಂದ 7 ಕೋಟಿ ರೂ. ಅನುದಾನ

kanaka bhavana bhumi pooje
ಶಿವಮೊಗ್ಗದಲ್ಲಿ ಶ್ರೀ ಕನಕ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಸಚಿವರಾದ ಬೈರತಿ ಸುರೇಶ್, ಮಧು ಬಂಗಾರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಭೂಮಿಪೂಜೆ ನೆರವೇರಿಸಿದರು. ಅಮೋಘ ಸಿದ್ದರಾಮನಂದ ಸ್ವಾಮೀಜಿ, ಎಸ್.ಎನ್.ಚನ್ನಬಸಪ್ಪ, ಆರ್.ಪ್ರಸನ್ನಕುಮಾರ್, ಎಸ್.ಕೆ.ಮರಿಯಪ್ಪ, ಸಿದ್ದಪ್ಪ ಇದ್ದರು.
Published on

ಶಿವಮೊಗ್ಗ: ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಕನಕ ಸಮುದಾಯ ಭವನವನ್ನು ಒಂದೂವರೆ ವರ್ಷದೊಳಗೆ ಪೂರ್ಣಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದಲೇ ಉದ್ಘಾಟಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಭರವಸೆ ನೀಡಿದರು.

ನಗರದ ಬಾಲರಾಜ್ ಅರಸ್ ರಸ್ತೆಯ ಕುರುಬರ ಹಾಸ್ಟೆಲ್ ಜಾಗದಲ್ಲಿ ಶನಿವಾರ ಶ್ರೀ ಕನಕ ಸಮುದಾಯ ಭವನದ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಸಮುದಾಯ ಭವನಕ್ಕೆ ಈಗಾಗಲೇ ಸಿದ್ದರಾಮಯ್ಯ ಅವರು 3.5 ಕೋಟಿ ರೂ. ನೀಡಿದ್ದಾರೆ. ವೈಯಕ್ತಿಕ ನೆರವಿನ ಜತೆಗೆ ಸರ್ಕಾರದಿಂದ ಇನ್ನೂ 3.5 ಕೋಟಿ ರೂ. ಅನುದಾನ ಕೊಡಿಸುವುದಾಗಿ ಹೇಳಿದರು.

12 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಸಮುದಾಯ ಭವನ ನಿರ್ಮಾಣಕ್ಕೆ ಅಂದಾಜು ವೆಚ್ಚ ಸಿದ್ಧಪಡಿಸಲಾಗಿದೆ. ಆದರೆ ಸರ್ಕಾರದಿಂದಲೇ ಅಷ್ಟೂ ಹಣ ನೀಡುವುದು ಕಷ್ಟ. 7 ಕೋಟಿ ರೂ. ಅನ್ನು ಸರ್ಕಾರದಿಂದ ನೀಡಲಿದ್ದು ಉಳಿದ ಹಣವನ್ನು ಜನಪ್ರತಿನಿಧಿಗಳು, ಸಂಘಸಂಸ್ಥೆಗಳು, ಸಮಾಜದ ದಾನಿಗಳಿಂದ ಸಂಗ್ರಹಿಸುವಂತೆ ಸಲಹೆ ನೀಡಿದರು.

ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿದರು. ಕುರುಬರ ಜಡೇದೇವರ ಮಠದ ಅಮೋಘ ಸಿದ್ಧರಾಮನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕ ಎಸ್.ಎನ್.ಚನ್ನಬಸಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ಎಂಎಲ್‌ಸಿ ಡಾ. ಧನಂಜಯ ಸರ್ಜಿ, ಗ್ಯಾರಂಟಿ ಅನುಷ್ಠಾನದ ಉಪಾಧ್ಯಕ್ಷ ಸೂರಜ್ ಹೆಗ್ಡೆ, ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಸಂಘದ ರಾಜ್ಯ ಉಪಾಧ್ಯಕ್ಷ ಕೆ.ರಂಗನಾಥ, ನಿರ್ದೇಶಕ ಶರತ್ ಮರಿಯಪ್ಪ, ಮುಖಂಡರಾದ ಎಸ್.ಕೆ.ಮರಿಯಪ್ಪ, ನಗರದ ಮಹಾದೇವಪ್ಪ, ಎಂ.ಶ್ರೀಕಾಂತ್, ಎಚ್.ಸಿ.ಯೋಗೇಶ್, ನಾಗರಾಜ್ ಕಂಕಾರಿ, ಎಸ್.ಪಿ.ಶೇಷಾದ್ರಿ, ಗೋಣಿ ಮಾಲತೇಶ್, ಸಿ.ಎಚ್.ಮಾಲತೇಶ್, ಸಿದ್ದಪ್ಪ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net