ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; 4% ತುಟ್ಟಿ ಭತ್ಯೆ ಹೆಚ್ಚಿಸಿದ ರಾಜ್ಯ ಸರ್ಕಾರ

Vidhanasoudha
Published on

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇಕಡಾ 31ರಿಂದ 35ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2023 ಜನವರಿ 1 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಿಸಿದೆ.

2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ಸರ್ಕಾರಿ ನೌಕರರಿಗೆ 2023 ಜನವರಿ 1ರಿಂದಲೇ ತುಟ್ಟಿ ಭತ್ಯೆ ಹೆಚ್ಚಳ ಅನ್ವಯವಾಗಲಿದೆ.

ಯುಜಿಸಿ, ಎಐಸಿಟಿಇ, ಐಸಿಎಆರ್‌ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಆದೇಶ ಅನ್ವಯಿಸಲಿದೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಹಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್‌ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೆ ಈ ಆದೇಶ ಅನ್ವಯಿಸುತ್ತದೆ ಎಂದು ಸರ್ಕಾರ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net