ಜನರ ಪ್ರೀತಿ ಗಳಿಸುವುದು ಸುಲಭವಲ್ಲ

hhr send off
ಎಮ್ಮೆಹಟ್ಟಿಯ ಶಿಕ್ಷಕ ಬಸವಂತರಾವ್ ದಾಳೆ ವರ್ಗಾವಣೆ ಪ್ರಯುಕ್ತ ಗ್ರಾಮಸ್ಥರು ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಶಿಕ್ಷಕ ಬಸವಂತರಾವ್, ರಂಗನಾಥ್, ರಾಮಕೃಷ್ಣ ಇತರರಿದ್ದರು.
Published on

ಹೊಳೆಹೊನ್ನೂರು: ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಕೆಲಸ ಮಾಡಿ ಜನರ ಪ್ರೀತಿ ಗಳಿಸುವುದು ಸುಲಭದ ಮಾತಲ್ಲ ಎಂದು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಂಗನಾಥ್ ಹೇಳಿದರು.
ಸಮೀಪದ ಎಮ್ಮೆಹಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಶಿಕ್ಷಕ ಬಸವಂತರಾವ್ ದಾಳೆ ವರ್ಗಾವಣೆ ಪ್ರಯುಕ್ತ ಗ್ರಾಮಸ್ಥರು ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಹಾಗೂ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ಬಸವಂತರಾವ್ ದಾಳೆ 18 ವಷರ್ ಎಮ್ಮೆಹಟ್ಟಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. ಈ ಹಿಂದೆ ಸರ್ಕಾರಿ ಶಾಲೆಗೆ ಸ್ಥಳವಿರಲಿಲ್ಲ. ಆಗ ಗ್ರಾಮದ ಮುಖಂಡರೊಂದಿಗೆ ಮಾತುಕತೆ ನಡೆಸಿ ಶಾಲೆಗಾಗಿ ಎರಡು ಎಕರೆ ಜಾಗ ಮೀಸಲಿಡಲು ಪ್ರಮುಖ ಪಾತ್ರ ವಹಿಸಿದ್ದರು. ಕಿರಿಯ ಪ್ರಾಥಮಿಕ ಶಾಲೆಯನ್ನು ಹಿರಿಯ ಪ್ರಾಥಮಿಕ ಶಾಲೆಯನ್ನಾಗಿ ಮೇಲ್ದರ್ಜೇಗೇರಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ ಎಂದರು.
ಮುಖ್ಯಶಿಕ್ಷಕ ರಾಮಕೃಷ್ಣ, ಪ್ರಮುಖರಾದ ಬಸವರಾಜ್, ಕೃಷ್ಣೋಜಿರಾವ್, ದೇವಾಜಿರಾವ್, ಪರಶುರಾಮ್, ಕೃಷ್ಣಮೂರ್ತಿ, ಸಂತೋಷ್, ಲಲಿತಮ್ಮ, ಸೀಮಾ, ತಬ್ಬಸುಮ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net