

ಬೆಂಗಳೂರು: ಮಾಜಿ ಪ್ರಧಾನಿ, ಆರ್ಥಿಕ ಸುಧಾರಣೆಯ ಹರಿಕಾರ ಮನಮೋಹನ್ ಸಿಂಗ್ (Manmohan Singh) ಅವರು ಡಿಸೆಂಬರ್ 26ರಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮಾಜಿ ಪ್ರಧಾನಿಗಳಿಗೆ ಗೌರವಾರ್ಥವಾಗಿ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಲಾಗಿದ್ದು, ನಾಳೆ (ಡಿಸೆಂಬರ್ 27) ಸರ್ಕಾರಿ ರಜೆ ಘೋಷಿಸಲಾಗಿದೆ.
2004 ರಿಂದ 2014ರವರೆಗೆ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ಮನಮೋಹನ್ ಸಿಂಗ್ ಅವರು ಈ ವರ್ಷದ ಏಪ್ರಿಲ್ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದರು. 1991ರಲ್ಲಿ ರಾಜಕೀಯ ಪ್ರವೇಶಿಸಿದ ಮನಮೋಹನ್ ಸಿಂಗ್ ಅವರು ಪಿವಿ ನರಸಿಂಹ ರಾವ್ ಅವರ ಸಚಿವ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದರು.