PSI ಅನುಮಾನಸ್ಪದ ಸಾವು ಕೇಸ್​; ಸಿಐಡಿ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

yadagir psi
Published on

ಬೆಂಗಳೂರು: ಯಾದಗಿರಿ ನಗರ ಸೈಬರ್​ ಠಾಣೆ ಪಿಎಸ್​ಐ ಪರಶುರಾಮ್​ ಅವರ ಅನುಮಾನಾಸ್ಪದ ಸಾವಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಈ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶಿಸಿದೆ.

ಪಿಎಸ್​ಐ ಪರಶುರಾಮ್​ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆಯಾದರೂ. ಕುಟುಂಬಸ್ಥರು ಪರಶುರಾಮ್​ ಅವರ ಸಾವಿಗೆ ಯಾದಗಿರಿ ಶಾಸಕ ಮತ್ತು ಅವರ ಪುತ್ರನೇ ಕಾರಣ ಎಂದು ಆರೋಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸಿಐಡಿ ವರ್ಗಾಯಿಸಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದೆ.

ಘಟನೆ ನಡೆದ 17 ಗಂಟೆಗಳ ಬಳಿಕ ಮೃತರ ಪತ್ನಿ ನೀಡಿದ ದೂರಿನ ಆಧಾರದ ಮೇರೆಗೆ ಪೊಲೀಸರು ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ  ಪಾಟೀಲ್, ಪುತ್ರ ಪಂಪನಗೌಡ ವಿರುದ್ಧ ​​ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದರಂತೆ​ 352, 108 (3), 5, ಬಿಎನ್ಎಸ್ 2023 ಮತ್ತು ಕಲಂ 3(1), (ಆರ್), (ಎಸ್), 3 (ವಿ) ಸೇರಿದಂತೆ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net